ಬಾಗಲಕೋಟೆ: ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ಪರಿಶಿಷ್ಟ ಜಾತಿ ವಿಶೇಷ ಯೋಜನೆ ಮತ್ತು ಗಿರಿಜನ ಉಪಯೋಜನೆ ಅಡಿಯಲ್ಲಿ ಪ್ರವಾಸಿ ಟ್ಯಾಕ್ಸಿಗಳನ್ನು ನೀಡಲು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.

2011-12ನೇ ಸಾಲಿನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಅನಿವಾರ್ಯ ಕಾರಣ ಗಳಿಂದ ತಿರಸ್ಕರಿಸಲಾಗಿದ್ದು, ಹೊಸದಾಗಿ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲಘು ವಾಹನ ಚಾಲನಾ ಪರವಾನಗಿ, ಚಾಲಕರ ಬ್ಯಾಡ್ಜ್ ಹೊಂದಿರಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿರಬೇಕು. 20 ರಿಂದ 45 ವರ್ಷ ದೊಳಗಿರಬೇಕು. 10ನೇ ತರಗತಿಯಲ್ಲಿ ಪಾಸಾಗಿದ್ದು, ಗ್ರಾಮೀಣ ಪ್ರದೇಶದ ವರಿಗೆ ವಾರ್ಷಿಕ ₨ 40 ಸಾವಿರ ಹಾಗೂ ನಗರ ಪ್ರದೇಶದವರಿಗೆ ₨ 55 ಸಾವಿರ ವರಮಾನ ಮೀರಿರಬಾರದು.

ತಹಶೀಲ್ದಾರರಿಂದ ಪಡೆದ ವಾಸಸ್ಥಳದ ದೃಢೀಕೃತ ಪ್ರತಿ ಸಲ್ಲಿಸಬೇಕು. ಈಗಾಗಲೇ ಇಲಾಖೆ ಯಿಂದ ಸಹಾಯಧನದಲ್ಲಿ ಪ್ರವಾಸಿ ಟ್ಯಾಕ್ಸಿ ಪಡೆದ ಪಲಾನುಭವಿಗಳಿಗೆ ಅವಕಾಶವಿರುವುದಿಲ್ಲ. ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಇದೇ 11 ರಿಂದ 26ರ ವರೆಗೆ ಸಹಾಯಕ ನಿರ್ದೇಶಕರು, ಪ್ರಾದೇಶಿಕ ಪ್ರವಾಸಿ ಕಚೇರಿ, ಜಿಲ್ಲಾಡಳಿತ ಭವನ, ಕೊಠಡಿ ಸಂ.137, ನವನಗರ, ಬಾಗಲಕೋಟೆ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಇದೇ 26 ರಂದು ಸಂಜೆ 4 ಗಂಟೆಯೊಳಗಾಗಿ ಸಲ್ಲಿಸಬಹು ದಾಗಿದೆ.

ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಪ್ರವರ್ತಕರಾದ ಕೆ.ರಮೇಶ ದೂ.ಸಂ. 08354-235709 ಸಂಪರ್ಕಿಸುವಂತೆ ಪ್ರಾದೇ ಶಿಕ ಪ್ರವಾಸಿ ಕಚೇರಿಯ ಪ್ರಭಾರ ಸಹಾಯಕ ನಿರ್ದೇಶಕ ಮಂಜುನಾಥ ಸುಳ್ಳೊಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.