`ಪ್ರವಾಸಿ ತಾಣವಾಗಿ ಪ್ರಕೃತಿ ವನ ಅಭಿವೃದ್ಧಿಗೆ ಚಿಂತನೆ'

ಶುಕ್ರವಾರ, ಜೂಲೈ 19, 2019
28 °C

`ಪ್ರವಾಸಿ ತಾಣವಾಗಿ ಪ್ರಕೃತಿ ವನ ಅಭಿವೃದ್ಧಿಗೆ ಚಿಂತನೆ'

Published:
Updated:

ಚನ್ನರಾಯಪಟ್ಟಣ: ಪಟ್ಟಣದ ಹೊರವಲಯದಲ್ಲಿರುವ ಬೆಲಸಿಂದ ಪ್ರಕೃತಿ ವನವನ್ನು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸ ಲಾಗಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.ಪಟ್ಟಣದಲ್ಲಿ ಭಾನುವಾರ ನಡೆದ ಬೆಲಸಿಂದ ಗ್ರಾಮ ಅರಣ್ಯ ಸಮಿತಿಯ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಈಜುಕೊಳ ನಿರ್ಮಾಣ, ದೋಣಿ ವಿಹಾರಕ್ಕೆ ಕೆರೆ ವಿಸ್ತರಣೆಯ ಯೋಚನೆ ಇದೆ. ಕೆರೆಯನ್ನು ಪ್ರವಾಸಿ ಕೇಂದ್ರವನ್ನಾಗಿ ರೂಪಿಸಬೇಕಿದೆ.ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಲಾಗಿದ್ದು, ಸದ್ಯದಲ್ಲಿ ಅಧಿಕಾರಿಗಳು ಬೆಲಸಿಂದ ಪ್ರಕೃತಿ ವನಕ್ಕೆ ಭೇಟಿ ನೀಡಿ ಅರಣ್ಯಾಧಿಕಾರಿಗಳ ಜೊತೆ ಚರ್ಚಿಸಲಿದ್ದಾರೆ. ಪ್ರವಾಸೋದ್ಯಮ ಇಲಾಖೆಯಿಂದ ಅರಣ್ಯ ಇಲಾಖೆಗೆ ಅನುದಾನ ಬಿಡುಗಡೆ ಮಾಡಲು ಅವಕಾಶವಿದೆ ಎಂದರು.ಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ 7.50 ಕೋಟಿ ರೂಪಾಯಿ ವೆಚ್ಚದಲ್ಲಿ ನಾಲ್ಕು ವೈದ್ಯರ ವಸತಿ ಗೃಹಗಳನ್ನು ನಿರ್ಮಿಸಲಾಗುವುದು ಮತ್ತು ರಸ್ತೆ ದುರಸ್ತಿ ಮಾಡಲಾಗುವುದು. ಪಟ್ಟಣದ ಬಾಗೂರು ರಸ್ತೆಯಲ್ಲಿರುವ ಸ್ಮಶಾನವನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.ಪರಿಸರವಾದಿ ಸಿ.ಎನ್. ಅಶೋಕ್, ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಗೋವಿಂದೇಗೌಡ ಮಾತನಾಡಿದರು. ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಬಿ.ಎಚ್. ಶಿವಣ್ಣ, ಅರಣ್ಯ ಸಮಿತಿ ಸದಸ್ಯ ಬಿ.ಟಿ. ಪುಟ್ಟಸ್ವಾಮಿ, ಕೃಷ್ಣೇಗೌಡ,  ವಲಯ ಅರಣ್ಯಾಧಿಕಾರಿ ಎ.ಈ. ಧರ್ಮಪ್ಪ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry