ಬೆಂಗಳೂರು: ಪ್ರವಾಸೋದ್ಯಮ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆದಾರರನ್ನು ಆಕರ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕಾಗಿ 2014–2019ರ ಹೊಸ ಪ್ರವಾಸೋದ್ಯಮ ನೀತಿಯಲ್ಲಿ, ಪ್ರವಾಸೋದ್ಯಮ ಕ್ಷೇತ್ರಗಳ ಅಭಿವೃದ್ಧಿ ಮತ್ತು ಪ್ರವಾಸಿಗಳಿಗೆ ಮೂಲಸೌಕರ್ಯ ಹೆಚ್ಚಿಸುವುದಕ್ಕೆ ಮತ್ತಷ್ಟು ಉತ್ತೇಜನಗಳನ್ನು ಪ್ರಕಟಿಸಲಿದೆ.

ಹೊಸ ಪ್ರವಾಸೋದ್ಯಮ ನೀತಿ ರೂಪಿಸುವ ಸಂಬಂಧ ಸೋಮವಾರ ವಿಕಾಸಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ, ‘ರೆಸಾರ್ಟ್ಗಳು ಅಥವಾ ಹೋಟೆಲುಗಳ ನಿರ್ಮಾಣಕ್ಕೆ ಸರ್ಕಾರ ಹೂಡಿಕೆ ಮಾಡುವುದಿಲ್ಲ. ಖಾಸಗಿ ಹೂಡಿಕೆದಾರರಿಗೆ ಹೆಚ್ಚು ಉತ್ತೇಜನ ನೀಡಲಾಗುವುದು’ ಎಂದರು.

‘ಹೊಸ ನೀತಿಯ ಅಡಿಯಲ್ಲಿ ಖಾಸಗಿ ಹೂಡಿಕೆದಾರರಿಗೆ ಹೆಚ್ಚಿನ ರಿಯಾಯಿತಿ ಮತ್ತು ಉತ್ತೇಜನಗಳನ್ನು ನೀಡಲಾಗುವುದು. ಹೂಡಿಕೆಗೆ ಸಂಬಂಧಿಸಿದ ನಿಯಂತ್ರಣಗಳನ್ನು ಸಡಿಲಗೊಳಿಸಲು ಹೊಸ ಕಾಯ್ದೆ ರೂಪಿಸಲಾಗುವುದು’ ಎಂದು ತಿಳಿಸಿದರು.

ಪರಿಸರ ಪ್ರವಾಸೋದ್ಯಮ, ಕರಾವಳಿ ಪ್ರವಾಸೋದ್ಯಮ, ಕೃಷಿ ಪ್ರವಾಸೋದ್ಯಮ, ಗ್ರಾಮೀಣ ಪ್ರವಾಸೋದ್ಯಮ, ಆಯುರ್ವೇದ ಮತ್ತು ನಿಸರ್ಗ ಚಿಕಿತ್ಸಾ ಪ್ರವಾಸೋದ್ಯಮ ಸೇರಿದಂತೆ 13 ಉಪ ವಿಭಾಗಗಳಲ್ಲಿ ಪ್ರವಾಸೋದ್ಯಮವನ್ನು ಗುರುತಿಸಲಾಗುವುದು. ಜೂನ್ ಮಧ್ಯದೊಳಗೆ ಹೊಸ ನೀತಿ ಸಿದ್ಧವಾಗಲಿದೆ ಎಂದು ಹೇಳಿದರು.

ಹೊಸ ಪ್ರವಾಸೋದ್ಯಮ ವಲಯಗಳನ್ನು ಅಸ್ತಿತ್ವಕ್ಕೆ ತರುವ ಪ್ರಸ್ತಾವ ನೂತನ ಪ್ರವಾಸೋದ್ಯಮ ನೀತಿಯಲ್ಲಿ ಇರಲಿದೆ. ವಿಜಾಪುರ, ಹಂಪಿ, ಐಹೊಳೆ, ಪಟ್ಟದಕಲ್ಲು ಮತ್ತಿತರ ಪ್ರದೇಶಗಳನ್ನು ಐತಿಹಾಸಿಕ ಮತ್ತು ಪುರಾತತ್ವ ವಲಯದಡಿ ಗುರುತಿಸಲಾಗುತ್ತದೆ. ಕರಾವಳಿ ಜಿಲ್ಲೆಗಳಲ್ಲಿ ಕರಾವಳಿ ಪ್ರವಾಸೋದ್ಯಮ ವಲಯ ಅಸ್ತಿತ್ವಕ್ಕೆ ಬರಲಿದೆ. ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ ₨ 45 ಕೋಟಿ ಅನುದಾನವನ್ನು ಈಗಾಗಲೇ ನೀಡಿದೆ. ಈ ಅನುದಾನದಲ್ಲಿ 18 ಕಡಲ ತೀರಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ಮುಂದಾಗಿದೆ. ಪಣಂಬೂರು ಬೀಚ್ನಲ್ಲಿ ಸರ್ಫಿಂಗ್ ಮತ್ತು ನೇತ್ರಾಣಿ ಬೀಚ್ನಲ್ಲಿ ಸ್ಕೂಬಾ ಡೈವಿಂಗ್ ವ್ಯವಸ್ಥೆ ಕಲ್ಪಿಸುವ ಯೋಜನೆಯಿದೆ.
ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಕರಾವಳಿ ನಿಯಂತ್ರಣ ವಲಯ (ಸಿಆರ್ಜೆಡ್) ಗಡಿಯನ್ನು ಮರು ಗುರುತಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದೇ ಎಂಬ ಪ್ರಶ್ನೆಗೆ, ‘ರಾಜ್ಯ ಸರ್ಕಾರ ಈಗಾಗಲೇ ಮನವಿ ಸಲ್ಲಿಸಿದೆ. ಕರಾವಳಿಯಲ್ಲಿ ಹೊಸದಾಗಿ ಅಪಾಯಕಾರಿ ವಲಯವನ್ನು ಗುರುತಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆ ಬಳಿಕ ಸಿಆರ್ಜೆಡ್ ಗಡಿಯನ್ನು ಹೊಸದಾಗಿ ಗುರುತಿಸಲಾಗುತ್ತದೆ’ ಎಂದು ಸಚಿವರು ಉತ್ತರಿಸಿದರು.

‘ಅಪಾಯಕಾರಿ ವಲಯ ಗುರುತಿಸಲು ಕೇಂದ್ರ ಸರ್ಕಾರವು ಸರ್ವೆ ಆಫ್ ಇಂಡಿಯಾವನ್ನು ಸಂಪರ್ಕಿಸಿತ್ತು. ಆದರೆ, ಅದಕ್ಕೂ ಮೊದಲು ಪ್ರವಾಸೋದ್ಯಮ ಅಭಿವೃದ್ಧಿಯನ್ನು ದೃಷ್ಟಿಯಲ್ಲಿ ಇರಿಸಿಕೊಂಡು ಸಿಆರ್ಜೆಡ್ ಗಡಿಯನ್ನು ಹೊಸದಾಗಿ ಗುರುತಿಸಲು ವಿಶೇಷ ಸಮಿತಿ ರಚಿಸುವಂತೆ ರಾಜ್ಯ ಸರ್ಕಾರ ಆಗ್ರಹಿಸಿತ್ತು. ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಈವರೆಗೂ ಅಧಿಕೃತ ಮಾಹಿತಿ ಬಂದಿಲ್ಲ’ ಎಂದರು.

ರಾಜ್ಯದ 320 ಕಿ.ಮೀ. ಉದ್ದದ ಕರಾವಳಿ ಪ್ರದೇಶದಲ್ಲಿ 44 ತೀರಗಳನ್ನು ಅಭಿವೃದ್ಧಿಪಡಿಸಲು ಸಿಆರ್ಜೆಡ್ನಿಂದ ವಿನಾಯಿತಿ ನೀಡುವಂತೆ ರಾಜ್ಯ ಸರ್ಕಾರ ಕೋರಿದೆ. ಪ್ರವಾಸಿಗರಿಗೆ ರಕ್ಷಣೆ ನೀಡಲು ಗೋವಾ ಮಾದರಿಯಲ್ಲಿ ಗೃಹ ಸಚಿವಾಲಯದಲ್ಲಿ ನೋಂದಾಯಿತವಾದ ಖಾಸಗಿ ಭದ್ರತಾ ಸಂಸ್ಥೆಗಳ ಸಿಬ್ಬಂದಿಯನ್ನು ನಿಯೋಜಿಸುವ ಬಗ್ಗೆಯೂ ರಾಜ್ಯ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.