ಗುರುವಾರ , ಮೇ 26, 2022
31 °C

ಪ್ರವಾಸೋದ್ಯಮ: ಹೂಡಿಕೆಗೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಹೂಡಿಕೆಗೆ ವಿಪುಲ ಅವಕಾಶಗಳಿವೆ. ಖಾಸಗಿ ಸಂಸ್ಥೆಗಳು ಈ ಕ್ಷೇತ್ರದಲ್ಲಿ ಹೂಡಿಕೆಗೆ ಮುಂದಾದರೆ ಸರ್ಕಾರದಿಂದ ಅಗತ್ಯ ಸಹಾಯ ಒದಗಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಕೆ. ವಿಶ್ವನಾಥ ರೆಡ್ಡಿ ತಿಳಿಸಿದರು.ಅಗ್ರಿಗೋಲ್ಡ್ ಇನ್ಫ್ರಾ ಡೆವಲಪರ್ಸ್‌ ಸಂಸ್ಥೆ ವತಿಯಿಂದ ನಗರದಲ್ಲಿ ಏರ್ಪಡಿಸಲಾಗಿದ್ದ ಸಂಸ್ಥೆಯ ಕೈಪಿಡಿ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.  ‘ಮಧ್ಯಮ ವರ್ಗದ ಜನರ ಕನಸನ್ನು ಸಾಕಾರಗೊಳಿಸುವಂತಹ ಯೋಜನೆಗಳನ್ನು ಹಾಕಿಕೊಂಡಿರುವ ಖಾಸಗಿ ಸಂಸ್ಥೆಗಳು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಬಂಡವಾಳ ಹೂಡಲು ಮುಂದಾಗಬೇಕು. ಇದರಿಂದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಯಾಗಲಿದೆ’ ಎಂದು ಅವರು ಹೇಳಿದರು.ಅಗ್ರಿ ಗೋಲ್ಡ್ ಗ್ರೂಪ್‌ನ ಅಧ್ಯಕ್ಷ ವಿ.ಆರ್.ರಾವ್ ಅವ್ವಾಸ್ ಮಾತನಾಡಿ, ‘ಈಗಾಗಲೇ ಪಾವಗಡ, ಕೋಲಾರ, ಮಾಲೂರು, ವಿಜಾಪುರ, ಬಾಗಲೂರು, ಹೊಸೂರುಗಳಲ್ಲಿ ಟೌನ್ಶಿಪ್ ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.