ಪ್ರವಾಸ ಅಭಿಯಾನ

7

ಪ್ರವಾಸ ಅಭಿಯಾನ

Published:
Updated:

ಬೆಂಗಳೂರು: ವೈವಿಧ್ಯಮಯ ಸಂಸ್ಕೃತಿ ಮತ್ತು ಶ್ರೀಮಂತ ಪರಂಪರೆ ಹೊಂದಿರುವ ರಾಜ್ಯ ಬಿಹಾರ. ಇಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿದ್ದು,  ಆ ನಿಟ್ಟಿನಲ್ಲಿ ಅಭಿವೃದ್ಧಿ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಬಿಹಾರ ಪ್ರವಾಸೋದ್ಯಮ ಇಲಾಖೆಯ ಸಹಾಯಕ ವ್ಯವಸ್ಥಾಪಕ ನವೀನ್‌ಕುಮಾರ್ ಹೇಳಿದ್ದಾರೆ.ಬಿಹಾರ ಪ್ರವಾಸೋದ್ಯಮ ಇಲಾಖೆ, ಪ್ರಚಾರ ಅಭಿಯಾನದ ಅಂಗವಾಗಿ ಶುಕ್ರವಾರ ಇಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮೂಲಸೌಕರ್ಯ ವೃದ್ಧಿ, ರೆಸಾರ್ಟ್‌ಗಳ ನಿರ್ಮಾಣ, ಪರಿಸರ ಪ್ರವಾಸೋದ್ಯಮ, ಪ್ರಕೃತಿ ಚಿಕಿತ್ಸೆ ಸೇರಿದಂತೆ ಹಲವು  ಯೋಜನೆಗಳ ಮೂಲಕ ಇನ್ನಷ್ಟು ಪ್ರವಾಸಿಗರನ್ನು ರಾಜ್ಯಕ್ಕೆ ಆಕರ್ಷಿಸಲಾಗುವುದು ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry