ಶುಕ್ರವಾರ, ಜುಲೈ 23, 2021
22 °C

`ಪ್ರವಾಹ ನಿರ್ವಹಣೆಗೆ ಸಜ್ಜಾಗಿ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಮಹಾರಾಷ್ಟ್ರ ಹಾಗೂ ಜಿಲ್ಲೆಯ ಕೆಲ ಭಾಗಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಬಂದರೆ, ಅದನ್ನು ಪರಿಣಾಮಕಾರಿಯಾಗಿ ಎದುರಿಸಲು ಎಲ್ಲ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎನ್. ಜಯರಾಮ್ ಅವರು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರವಾಹ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, `ಮಹಾರಾಷ್ಟ್ರದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಕೊಯ್ನೊ ನದಿಯಿಂದ ನೀರು ಬಿಟ್ಟರೆ, ಜಿಲ್ಲೆಯ ಕೆಲ ತಾಲ್ಲೂಕುಗಳಲ್ಲಿ ಪ್ರವಾಹ ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು' ಎಂದರು.`ಪ್ರವಾಹ ಸಂದರ್ಭದಲ್ಲಿ ಮುಳುಗಡೆ ಯಾಗುವ ಗ್ರಾಮಗಳ ಪಟ್ಟಿ ಸಿದ್ಧಪಡಿಸ ಬೇಕು. ಸಹಾಯಕ್ಕೆ ಬರುವ ಸ್ವಯಂ ಸೇವಾ ಸಂಘಗಳ ಪಟ್ಟಿ ಮಾಡಿ, ಅವರ ವಿಳಾಸ, ದೂರವಾಣಿ ಸಂಖ್ಯೆ ಸಂಗ್ರಹಿಸಿ ತಹಸೀಲ್ದಾರರ ಕಚೇರಿ, ಗ್ರಾಮ ಪಂಚಾ ಯಿತಿಗಳಲ್ಲಿ ಸಂಗ್ರಹಿಸಿ ಇಡಬೇಕು' ಎಂದು ಸೂಚಿಸಿದರು.ಪ್ರವಾಹದ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ನೀರು ಸರಾಗವಾಗಿ ಹಳ್ಳಕೊಳ್ಳಗಳಲ್ಲಿ ಹರಿದು ಹೋಗುವಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಚಿಕ್ಕೋಡಿ ವಿಭಾಗದ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದರು.ಚಿಕ್ಕೋಡಿ ವಿಭಾಗದಲ್ಲಿ ಜನ- ಜಾನುವಾರು ಸಂರಕ್ಷಣೆ ಹಾಗೂ ಸುರಕ್ಷಿತ ಸ್ಥಳಕ್ಕೆ ಸಾಗಾಣಿಕೆಗಾಗಿ ಯಾಂತ್ರೀಕೃತ ಹಾಗೂ ಮಾನವ ಚಾಲಿತ ಬೋಟುಗಳನ್ನು ಸಿದ್ಧತೆ ಮಾಡಿ ಇಟ್ಟುಕೊಳ್ಳುವಂತೆ ಅಥಣಿ, ಚಿಕ್ಕೋಡಿ ಮತ್ತು ರಾಯಬಾಗ ತಹಸೀಲ್ದಾರರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.ಪ್ರಕೃತಿ ವಿಕೋಪ ವೇಳೆ ಕುಡಿಯುವ ನೀರು, ಆಹಾರ ಪೂರೈಕೆ ಹಾಗೂ ಗಂಜಿ ಕೇಂದ್ರ ಸ್ಥಾಪನೆಗಾಗಿ ತಹಸೀಲ್ದಾರರು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು,ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಗಳು, ನೋಡಲ್ ಅಧಿಕಾರಿಗಳು ಮುನ್ನೆ ಚ್ಚರಿಕೆ ವಹಿಸಬೇಕು ಎಂದು ಹೇಳಿದರು.ನಗರ ಹಾಗೂ ಗ್ರಾಮೀಣ ಭಾಗದ ಕೊಳಚೆ ಪ್ರದೇಶಗಳಲ್ಲಿ ಮನೆ ಕಟ್ಟಿ ಕೊಂಡು ವಾಸಿಸುವವರ ಮನೆಯೊಳಗೆ ನೀರು ನುಗ್ಗಿ ಅನಾಹುತಗಳಾಗಬ ಹುದು. ಅಂತಹ ಪ್ರದೇಶಗಳಿಗೆ ಅಧಿಕಾರಿ ಗಳು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳ ಬೇಕು ಎಂದು ಅವರು ಸೂಚಿಸಿದರು.ಪ್ರಕೃತಿ ವಿಕೋಪ ಪರಿಹಾರ ಉಸ್ತು ವಾರಿ ಸಮಿತಿ ಉಪಾಧ್ಯಕ್ಷೆ ಶಾಂತಾ ಕಲ್ಲೋಳಿಕರ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ದೀಪಾ ಚೋಳನ, ಪಾಲಿಕೆ ಆಯುಕ್ತೆ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಹೆಚ್ಚು ವರಿ ಜಿಲ್ಲಾಧಿಕಾರಿ ಡಾ. ಪ್ರವೀಣ ಕುಮಾರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.