ಗುರುವಾರ , ಮೇ 26, 2022
23 °C

ಪ್ರವಾಹ: ಸಾವಿನ ಸಂಖ್ಯೆ 13ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಲಂಬೊ (ಡಿಪಿಎ): ಶ್ರೀಲಂಕಾದ ಈಶಾನ್ಯ ಮತ್ತು ಉತ್ತರ ಕೇಂದ್ರ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಉಲ್ಬಣವಾಗಿದ್ದು, ನೆರೆಗೆ ಸಿಲುಕಿ ಮೃತಪಟ್ಟವರ ಸಂಖ್ಯೆ ಶನಿವಾರ 13ಕ್ಕೆ ಏರಿದೆ. ಇದುವರೆಗೆ ಸುಮಾರು 80 ಸಾವಿರ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಲ್ಲಿನ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.ಕೊಲಂಬೊದಿಂದ 180 ಕಿ.ಮೀ. ದೂರದಲ್ಲಿರುವ ಬೌದ್ಧ ದೇವಾಲಯಗಳಿರುವ ಪ್ರವಾಸಿ ಸ್ಥಳ ಅನುರಾಧಾಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ನೀರಿನಿಂದ ಆವೃತವಾಗಿದ್ದು ಅದನ್ನು ಪ್ರವಾಸಿಗರ ಭೇಟಿಗೆ ಅಸುರಕ್ಷಿತ ಸ್ಥಳವೆಂದು ಘೋಷಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.