ಭಾನುವಾರ, ಜೂನ್ 20, 2021
28 °C

ಪ್ರವೇಶ ಪತ್ರಗಳಲ್ಲಿ ಜಾತಿ ನಮೂದು ಬೇಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇದೇ ಮಾರ್ಚ್ 15 ರಿಂದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುತ್ತವೆ. ಪದವಿಪೂರ್ವ ಶಿಕ್ಷಣ ಇಲಾಖೆಯು ಪರೀಕ್ಷಾ ಪ್ರವೇಶ ಪತ್ರಗಳಲ್ಲಿ ಪರಿಶಿಷ್ಟ ಜಾತಿ/ಪ.ವರ್ಗದ ವಿದ್ಯಾರ್ಥಿಗಳಿಗೆ ಅಭ್ಯರ್ಥಿಯ ಜಾತಿ/ವರ್ಗದ ಹೆಸರನ್ನು ನಮೂದಿಸಿ ವಿತರಿಸಲು ಹೊರಟಿದೆ.ಇದು ತೀರಾ ಅವೈಜ್ಞಾನಿಕ ಸಂಗತಿ.ಮುಕ್ತ ಮನಸ್ಸಿನಿಂದ ಪರೀಕ್ಷೆಗಳನ್ನು ಎದುರಿಸಬೇಕಾದ ವಿದ್ಯಾರ್ಥಿಗಳು ಕೊಠಡಿ ಮೇಲ್ವಿಚಾರಕರ ಬಳಿ ತಮ್ಮ ಪ್ರವೇಶ ಪತ್ರಗಳನ್ನು ಪರಿಶೀಲನೆಗಾಗಿ ತೋರಿಸಬೇಕಾದಾಗ ಕೀಳರಿಮೆಯಿಂದಲೂ ಕುಗ್ಗಿ ಹೋಗುತ್ತಾರೆ. ಇದು ವಿದ್ಯಾರ್ಥಿಗಳ ಚೈತನ್ಯ ಕುಗ್ಗಿಸುವ ಪ್ರಯತ್ನ.ರೋಗಗ್ರಸ್ಥ ಮನಸ್ಸಿನವರು ಈ ವರ್ಗದ ವಿದ್ಯಾರ್ಥಿಗಳನ್ನು ಅನುಮಾನದ ಕಣ್ಣುಗಳಿಂದ ನೋಡುವ ಮತ್ತು ಪೇಪರ್, ದಾರ, ನೀರು ಇತ್ಯಾದಿ ಅಗತ್ಯಗಳನ್ನು ಪೂರೈಸುವಲ್ಲಿ ಅಸಡ್ಡೆ ತೋರುವ ಸಾಧ್ಯತೆಗಳಿವೆ.ಮತ್ತು ಈ ವರ್ಗದ ವಿದ್ಯಾರ್ಥಿಗಳನ್ನು ಪೂರ್ವಗ್ರಹ ದೃಷ್ಟಿಯಿಂದ ನೋಡುವ ಸಾಧ್ಯತೆ ಇದೆ. ಆದ್ದರಿಂದ ಪ್ರವೇಶ ಪತ್ರದಲ್ಲಿ ನಮೂದಾಗಿರುವ ಜಾತಿ/ವರ್ಗದ ಕಾಲಂನ್ನು ಅಳಿಸಿ ವಿತರಣೆ ಮಾಡುವುದು ಸೂಕ್ತವೆನಿಸುತ್ತದೆ.ಪದವಿ ಪೂರ್ವ ಶಿಕ್ಷಣವು ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುವುದರಿಂದ ನಿರಾಳ ವಾತಾವರಣದಲ್ಲಿ ಪರೀಕ್ಷೆಗಳನ್ನು ನಡೆಸುವ ಜವಾಬ್ದಾರಿ ಪದವಿಪೂರ್ವ ಶಿಕ್ಷಣ ಇಲಾಖೆಯದು. ಸಂಬಂಧ ಪಟ್ಟ ಅಧಿಕಾರಿಗಳು ಈ ನಿಟ್ಟಿನಲ್ಲಿ ಸೂಕ್ತ  ಕ್ರಮ ತೆಗೆದುಕೊಳ್ಳಲು ಮುಂದಾಗಬೇಕು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.