ಶುಕ್ರವಾರ, ಆಗಸ್ಟ್ 23, 2019
21 °C

ಪ್ರಶಸ್ತಿಗೆ ಅರ್ಜಿ ಆಹ್ವಾನ

Published:
Updated:

ಬೆಂಗಳೂರು:  ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯ ಹತ್ತು ಜಿಲ್ಲೆಗಳ ರೈತರು ಹಾಗೂ ರೈತ ಮಹಿಳೆಯರಿಂದ ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಅತ್ಯುತ್ತಮ ರೈತ ಹಾಗೂ ರೈತ ಮಹಿಳೆ ಮತ್ತು ಸಮಗ್ರ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡ ಒಬ್ಬ ರೈತ ಹಾಗೂ ರೈತ ಮಹಿಳೆಗೆ ಕಾರ್ಪೊರೇಷನ್ ಬ್ಯಾಂಕ್ ಪ್ರಾಯೋಜಿತ `ಕಾರ್ಪ್' ಪ್ರಶಸ್ತಿ ನೀಡಲಾಗುವುದು. ಪ್ರಶಸ್ತಿಯನ್ನು ನವೆಂಬರ್‌ನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಕೃಷಿ ಮೇಳದಲ್ಲಿ ಪ್ರದಾನ ಮಾಡಲಾಗುತ್ತದೆ.ಆಸಕ್ತರು ಆಯಾ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಕಚೇರಿ ಅಥವಾ ಹೆಬ್ಬಾಳದ ವಿಸ್ತರಣಾ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಸೆಪ್ಟೆಂಬರ್ 30ರ ಒಳಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ಅರ್ಜಿ ಸಲ್ಲಿಸುವ ವಿಳಾಸ: ವಿಸ್ತರಣಾ ನಿರ್ದೇಶಕರ ಕಚೇರಿ, ಕೃಷಿ ವಿಶ್ವವಿದ್ಯಾಲಯ, ಹೆಬ್ಬಾಳ.  ಹೆಚ್ಚಿನ ಮಾಹಿತಿಗೆ: 2341 8883

ವೆಬ್‌ಸೈಟ್ ವಿಳಾಸ: www.uasbangalore.edu.in

Post Comments (+)