ಪ್ರಶಸ್ತಿ ಸ್ವೀಕರಿಸಿದ ಸಿಂಧು

7

ಪ್ರಶಸ್ತಿ ಸ್ವೀಕರಿಸಿದ ಸಿಂಧು

Published:
Updated:

ನವದೆಹಲಿ (ಪಿಟಿಐ):  ಭರವಸೆಯ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ. ಸಿಂಧು ಮಂಗಳವಾರ ಅರ್ಜುನ ಪ್ರಶಸ್ತಿ ಸ್ವೀಕರಿಸಿದರು.ಆಗಸ್ಟ್‌ 31ರಂದು ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿತ್ತು. ಆದರೆ, ಸಿಂಧು ಇಂಡಿಯನ್‌ ಬ್ಯಾಡ್ಮಿಂಟನ್‌ ಲೀಗ್‌ನಲ್ಲಿ ಪಾಲ್ಗೊಂಡಿದ್ದ ಕಾರಣ ಆ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದರು. ಆದ್ದರಿಂದ ಕೇಂದ್ರ ಕ್ರೀಡಾ ಸಚಿವ ಜಿತೇಂದ್ರ ಸಿಂಗ್‌ ಮಂಗಳವಾರ ಪ್ರಶಸ್ತಿ ಪ್ರದಾನ ಮಾಡಿದರು.18 ವರ್ಷದ ಹೈದರಾಬಾದ್‌ನ ಆಟಗಾರ್ತಿ ಹೋದ ತಿಂಗಳು ನಡೆದ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನ ಸಿಂಗಲ್ಸ್‌ನಲ್ಲಿ ಕಂಚಿನ ಪದಕ ಜಯಿಸಿದ್ದರು. ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಮಲೇಷ್ಯಾ ಓಪನ್‌ ಟೂರ್ನಿಯಲ್ಲೂ ಚಾಂಪಿಯನ್ ಆಗಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry