ಬೆಂಗಳೂರು: ಎಂಜಿನಿಯರಿಂಗ್ ಕೋರ್ಸ್ಗಳ ಮೂರನೇ ಸೆಮಿಸ್ಟರ್ಗೆ ನೇರ ಪ್ರವೇಶ ಬಯಸಿರುವ ಡಿಪ್ಲೊಮಾ ಅಭ್ಯರ್ಥಿಗಳಿಗೆ ಭಾನುವಾರ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕಳೆದ ವರ್ಷದ ಪ್ರಶ್ನೆಪತ್ರಿಕೆ ಪುನರಾವರ್ತನೆ ಆಗಿರುವುದರಿಂದ ಮರು ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನಿಸಿದೆ.

2012ನೇ ಸಾಲಿನ ಪ್ರಶ್ನೆಪತ್ರಿಕೆಯನ್ನೇ 2013ನೇ ಸಾಲಿನ ಪರೀಕ್ಷೆಗೂ ನೀಡಿರುವುದು ದೃಢಪಟ್ಟಿದೆ. ಹೀಗಾಗಿ ಇದೇ 30ರಂದು ಮರು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮರು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಹೆಚ್ಚುವರಿಯಾಗಿ ಯಾವುದೇ ಶುಲ್ಕ ಪಾವತಿಸುವ ಅಗತ್ಯ ಇಲ್ಲ. ಮರು ಪರೀಕ್ಷೆಯ ಪರಿಷ್ಕೃತ ಪ್ರವೇಶ ಪತ್ರವನ್ನು ಮಂಗಳವಾರ ಸಂಜೆ ಆರು ಗಂಟೆ ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ಮೂಲಕ ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆಯ ಪುನರಾವರ್ತನೆಯಿಂದಾಗಿ ವಿದ್ಯಾರ್ಥಿಗಳಿಗೆ ಆಗಿರುವ ತೊಂದರೆಗಾಗಿ ಸಚಿವರು ವಿಷಾದ ವ್ಯಕ್ತಪಡಿಸಿದ್ದಾರೆ.

ಮರು ಪರೀಕ್ಷೆ ನಡೆಸುವ ಸರ್ಕಾರದ ತೀರ್ಮಾನದಿಂದಾಗಿ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿರುವ 24,255 ವಿದ್ಯಾರ್ಥಿಗಳು ಮತ್ತೆ ಪರೀಕ್ಷೆ ಬರೆಯುವಂತಾಗಿದೆ. ಪರೀಕ್ಷೆಯ ಹೊಣೆ ಹೊತ್ತಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಡಿದ ತಪ್ಪಿಗೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ.

ಪ್ರಶ್ನೆಪತ್ರಿಕೆ ಪುನರಾವರ್ತನೆ ಆಗಲು ಕಾರಣ ಏನು? ಎಲ್ಲಿ ಲೋಪ ಆಗಿದೆ ಎಂಬುದನ್ನು ಇನ್ನೂ ಪತ್ತೆಹಚ್ಚಿಲ್ಲ. ಈ ಬಗ್ಗೆ ತನಿಖೆಗೂ ಆದೇಶ ಮಾಡಿಲ್ಲ. ಈ ಬಗ್ಗೆ ದೇಶಪಾಂಡೆ ಅವರನ್ನು ಪ್ರಶ್ನಿಸಿದಾಗ, `ನಾನು ಬೆಂಗಳೂರಿನಲ್ಲಿ ಇಲ್ಲ. ರಾಜಧಾನಿಗೆ ಬಂದ ನಂತರ ಪ್ರತಿಕ್ರಿಯಿಸುತ್ತೇನೆ. ಲೋಪ ಆಗಿರುವುದು ಗೊತ್ತಾದ ಮರು ದಿನವೇ ಸರ್ಕಾರ ಎಚ್ಚೆತ್ತುಕೊಳ್ಳುವ ಮೂಲಕ ಒಳ್ಳೆಯ ಕೆಲಸ ಮಾಡಿದೆ' ಎಂದರು.

2013-14ನೇ ಸಾಲಿನ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ 180 ಅಂಕಗಳ ಪ್ರಶ್ನೆಪತ್ರಿಕೆಯ ಮೂರು ವಿಭಾಗಗಳಲ್ಲೂ ಪ್ರಶ್ನೆಗಳು ಪುನರಾವರ್ತನೆ ಆಗಿರುವುದಕ್ಕೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು.

ಡಿಪ್ಲೊಮಾ ಅಭ್ಯರ್ಥಿಗಳಿಗೆ ಹಗಲು ಮತ್ತು ಸಂಜೆ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಎಂಜಿನಿಯರಿಂಗ್ ಮೂರನೇ ಸೆಮಿಸ್ಟರ್ಗೆ ನೇರವಾಗಿ ಪ್ರವೇಶ ಪಡೆಯಲು ಅವಕಾಶ ಇದೆ. ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಕಾಲೇಜುಗಳಲ್ಲಿ ಲಭ್ಯವಿರುವ ಸರ್ಕಾರಿ ಕೋಟಾದ ಸೀಟುಗಳಿಗೆ ಪ್ರವೇಶ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.