ಗುರುವಾರ , ಮೇ 6, 2021
23 °C

ಪ್ರಶ್ನೆಪತ್ರಿಕೆ ಬಯಲು: ಪರೀಕ್ಷೆ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಪ್ರಶ್ನೆ ಪತ್ರಿಕೆ ಬಯಲಾದ ಹಿನ್ನೆಲೆಯಲ್ಲಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಬಿಎ ಪದವಿಯ ಶಿಕ್ಷಣಶಾಸ್ತ್ರದ ಐಚ್ಛಿಕ  ವಿಷಯದ 6ನೇ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಲಾಗಿದೆ.ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ ಕೈ ಬರಹದಲ್ಲಿರುವ ಪ್ರಶ್ನೆಗಳು ಬಯಲಾದ ಹಿನ್ನೆಲೆಯಲ್ಲಿ, ವಿಶ್ವವಿದ್ಯಾಲಯದ ವತಿಯಿಂದ ತನಿಖೆಗೆ ಆದೇಶ ನೀಡಲಾಗಿದೆ. ಕೈಬರಹದ ರೂಪದಲ್ಲಿನ ಪ್ರಶ್ನೆಗಳಿಗೂ, ಪ್ರಶ್ನೆ ಪತ್ರಿಕೆಗಳಲ್ಲಿರುವ ಪ್ರಶ್ನೆಗಳಿಗೂ ಶೇ 50ರಷ್ಟು ಸಾಮ್ಯತೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಎರಡು ಮೂರು ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ವಿವಿಯ ಮೌಲ್ಯಮಾಪನ ವಿಭಾಗದ ಕುಲಪತಿ ಡಾ.ರಂಗರಾಜ್ ವನದುರ್ಗ ತಿಳಿಸಿದ್ದಾರೆ. ವಿವಿ ವ್ಯಾಪ್ತಿಯ ಐದು ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಪರೀಕ್ಷೆ ನಡೆಯಬೇಕಿತ್ತು. ಪ್ರಶ್ನೆ ಪತ್ರಿಕೆ ಬಹಿರಂಗಗೊಂಡಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಿ, ಇದೇ 12ರಂದು ಬುಧವಾರಕ್ಕೆ ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.ತನಿಖೆ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವಿವಿ ಕುಲಪತಿ ಡಾ.ಮಂಜಪ್ಪ ಹೊಸಮನೆ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.