ಸೋಮವಾರ, ಜೂನ್ 14, 2021
23 °C

ಪ್ರಶ್ನೆ ಪತ್ರಿಕೆ ನಕಲು: ಜೆರಾಕ್ಸ್ ಅಂಗಡಿ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರಶ್ನೆ ಪತ್ರಿಕೆ ನಕಲು: ಜೆರಾಕ್ಸ್ ಅಂಗಡಿ ಪರಿಶೀಲನೆ

ತುಮಕೂರು: ನಗರ ಬಿ.ಎಚ್.ರಸ್ತೆಯಲ್ಲಿರುವ ಜೆರಾಕ್ಸ್ ಅಂಗಡಿಗಳಲ್ಲಿ ಪಿಯು ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ನಕಲು ಮಾಡಿ ಮಾರಲಾಗುತ್ತಿದೆ ಎಂಬ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರ ಸೂಚನೆ ಮೇರೆಗೆ ಬುಧವಾರ ಸಂಜೆ ಜಿಲ್ಲಾಧಿಕಾರಿ ಆರ್.ಕೆ.ರಾಜು ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳು ನಗರದ ಎಲ್ಲ ಜೆರಾಕ್ಸ್‌ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.ನಗರದ ಬಿ.ಎಚ್.ರಸ್ತೆಯ ಜೆರಾಕ್ಸ್ ಅಂಗಡಿಗಳಲ್ಲಿ ಪ್ರಶ್ನೆ ಪತ್ರಿಕೆಯನ್ನು ಅಕ್ರಮವಾಗಿ ಮಾರಲಾಗುತ್ತಿದೆ. ಇದರಿಂದ ಕಷ್ಟಪಟ್ಟು ಓದಿರುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ವಿದ್ಯಾರ್ಥಿಗಳೇ ನೇರವಾಗಿ ಪಿಯು ನಿರ್ದೇಶಕರಿಗೆ ದೂರು ನೀಡಿದ್ದರು.ಪಿಯು ನಿರ್ದೇಶಕರ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಈ ಕುರಿತು ಫ್ಯಾಕ್ಸ್ ಸಂದೇಶ ರವಾನೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆರ್.ಕೆ.ರಾಜು ಮತ್ತು ತಹಶೀಲ್ದಾರ್ ಅಹೋಬಲಯ್ಯ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳು ಜೆರಾಕ್ಸ್ ಅಂಗಡಿ ತಪಾಸಣೆ ನಡೆಸಿದರು.ಈ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಯ ವಿಶೇಷ ಸಭೆಯನ್ನು ಜಿಲ್ಲಾಧಿಕಾರಿ ನಡೆಸಿದರು. ಇಂಥ ಘಟನೆ ಮರುಕಳಿಸಿದರೆ ಜೆರಾಕ್ಸ್ ಅಂಗಡಿ ಮಾಲೀಕರ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಕೆ ನೀಡಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.