ತರೀಕೆರೆ: ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿ ರಾಜ್ಯ ಸಿಐಡಿ ಪೊಲೀಸರ ವಶದಲ್ಲಿದ್ದ ಐವರು ಆರೋಪಿಗಳನ್ನು ಮತ್ತು ನ್ಯಾಯಾಂಗ ಬಂಧನದಲ್ಲಿದ್ದ ನಾಲ್ವರು ಆರೋಪಿಗಳನ್ನು ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯ ಇದೇ 21 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಶುಕ್ರವಾರ ಆದೇಶಿಸಿತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಮತ್ತಿಬ್ಬರು ಪ್ರಮುಖ ಆರೋಪಿಗಳಿಗೂ 21ರ ವರೆಗೆ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯ ಆದೇಶಿಸಿದೆ.ಪ್ರಸ್ತುತ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಪಾದಿತರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ನಿರಾಕರಿಸಿದ್ದು, ಇದೆ 16ರಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಲು ನ್ಯಾಯಾಲಯ ನಿರ್ಧರಿಸಿದೆ.

ಶುಕ್ರವಾರ ಮಧ್ಯಾಹ್ನ ಸಿಐಡಿ ಪೊಲೀಸರು ಆರೋಪಿಗಳನ್ನು ಬಿಗಿ ಭದ್ರತೆಯೊಂದಿಗೆ ಹಾಜರುಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.