ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ನಲ್ಲಿರುವ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಸ್ಥಾನವನ್ನು ವಶಕ್ಕೆ ತೆಗೆದುಕೊಂಡಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಸನ್ನ ವೀರಾಂಜನೇಯಸ್ವಾಮಿ ದೇವಸ್ಥಾನ ಸಂರಕ್ಷಣಾ ಸಮಿತಿ ಸದಸ್ಯರು ನಡೆಸುತ್ತಿರುವ ಧರಣಿಯನ್ನು ಭಾನುವಾರವೂ ಮುಂದುವರಿಸಿದರು.

ಇತಿಹಾಸ ಪ್ರಸಿದ್ಧ ಈ ದೇವಾಲಯಕ್ಕೆ ವಾರ್ಷಿಕ ಎರಡು ಕೋಟಿ ರೂಪಾಯಿ ಆದಾಯ ಬರುತ್ತಿದೆ. ಬಡಮಕ್ಕಳ ಶಿಕ್ಷಣ ಸೇರಿದಂತೆ ಉಪಯುಕ್ತ ಕೆಲಸಗಳಿಗೆ ಆ ಹಣವನ್ನು ಬಳಸಿಕೊಳ್ಳಲಾಗುತ್ತಿದೆ.

ಆದ್ದರಿಂದ ಸರ್ಕಾರ ಕೂಡಲೇ ಈ ಕ್ರಮವನ್ನು ವಾಪಸ್ ಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ದೇವಾಲಯದ ಆಡಳಿತಕ್ಕೆ ನೋಟಿಸ್ ಕೂಡ ನೀಡದೇ ಸರ್ಕಾರ ಏಕಾಏಕಿ ಈ ರೀತಿ ಮಾಡಿರುವುದು ಸರಿಯಲ್ಲ. ಇದು ಧಾರ್ಮಿಕ ಭಾವನೆಗಳಿಗೆ ವಿರುದ್ಧವಾದ ಕೃತ್ಯ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸರ್ಕಾರದ ಈ ನಿರ್ಣಯದ ಹಿಂದೆ ಖಾಸಗಿಯವರ ಕೈವಾಡ ಇರುವಂತೆ ಕಾಣುತ್ತಿದೆ. ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಸಮಸ್ಯೆಗಳಿಗೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.