ಬುಧವಾರ, ಜೂನ್ 23, 2021
30 °C

ಪ್ರಹ್ಲಾದ ಜೋಶಿ ಬಿರುಸಿನ ಮತಯಾಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸಂಸದ ಪ್ರಹ್ಲಾದ ಜೋಶಿ ಬುಧವಾರ ನಗರದ ವಿವಿಧೆಡೆ ಬಿರುಸಿನ ಪ್ರಚಾರ ಕೈಗೊಂಡರು.ಬೆಳಿಗ್ಗೆ 6.30ರ ಸುಮಾರಿಗೆ ಇಂದಿರಾ ಗಾಜಿನ ಮನೆ ಉದ್ಯಾನಕ್ಕೆ ಆಗಮಿಸಿದ ಜೋಶಿ, ಅಲ್ಲಿನ ವಾಯು­ವಿಹಾರಿಗಳನ್ನು ಭೇಟಿ ಮಾಡಿ ಮತಯಾಚಿಸಿದರು. ‘ಮೋದಿಯನ್ನು ದೇಶದ ಪ್ರಧಾನಿಯನ್ನಾಗಿ ಮಾಡಲು ಬಿಜೆಪಿಗೆ ಮತ ಹಾಕಿ’ ಎಂದು ಕೋರಿದರು. 24ರಂದು ತಾವು ಚುನಾವಣೆಗೆ ನಾಮಪತ್ರ ಸಲ್ಲಿಸುವುದಾಗಿ ಅವರು ತಿಳಿಸಿದರು.ಮತ್ತೊಮ್ಮೆ  ಮೋದಿ ಪ್ರಚಾರ: ‘ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತೊಮ್ಮೆ ರಾಜ್ಯಕ್ಕೆ ಭೇಟಿ ನೀಡಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ಪ್ರಹ್ಲಾದ ಜೋಶಿ ತಿಳಿಸಿದರು.‘ರಾಜ್ಯಕ್ಕೆ ಎರಡು ದಿನ ಕಾಲ ಭೇಟಿ ನೀಡಲಿರುವ ಅವರು ಮೈಸೂರು, ಬೀದರ್‌, ಬೆಳಗಾವಿ, ಬಾಗಲ­ಕೋಟೆ ಮೊದಲಾದ ಕಡೆಗಳಲ್ಲಿ ರ್‍ಯಾಲಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ಕುರಿತು ಅವರೊಂದಿಗೆ ಚರ್ಚಿಸಿ ದಿನಾಂಕ ನಿಗದಿಪಡಿಸಲಾಗುವುದು’ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.