ಪ್ರಾಂಶುಪಾಲರ ವರ್ಗ: ವಿದ್ಯಾರ್ಥಿಗಳ ಪ್ರತಿಭಟನೆ

7

ಪ್ರಾಂಶುಪಾಲರ ವರ್ಗ: ವಿದ್ಯಾರ್ಥಿಗಳ ಪ್ರತಿಭಟನೆ

Published:
Updated:

ಕೃಷ್ಣರಾಜಪುರ: ಸ್ಥಳೀಯ ಸರ್ಕಾರಿ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ.ಎಸ್.ಕೃಷ್ಣಪ್ಪ ಅವರನ್ನು ಚಿಕ್ಕಬಳ್ಳಾಪುರ ಸರ್ಕಾರಿ ಕಾಲೇಜಿಗೆ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.`ಅವರು ಕಾಲೇಜಿಗೆ ಕುಡಿಯುವ ನೀರು, ಹೆಚ್ಚುವರಿ ಕೊಠಡಿ ಇತ್ಯಾದಿ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ.ಅವರ ಮಾರ್ಗದರ್ಶನದಲ್ಲಿ ಕಾಲೇಜು ಅಭಿವೃದ್ಧಿ ಹೊಂದಿದೆ. ಹೀಗಾಗಿ ವಿದ್ಯಾರ್ಥಿಗಳ ಹಿತಾಸಕ್ತಿ ಗಮನಿಸಿ ಸರ್ಕಾರ ವರ್ಗಾವಣೆಯನ್ನು ಹಿಂದಕ್ಕೆ ಪಡೆಯಬೇಕು' ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry