ಶುಕ್ರವಾರ, ಜೂನ್ 25, 2021
27 °C

ಪ್ರಾಂಶುಪಾಲರ ವಿರುದ್ಧ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಅಂಬೇಡ್ಕರ್ ಸಂಸ್ಮರಣಾ ದಿನಾಚರಣೆಗೆ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ಪ್ರಾಂಶುಪಾಲರ ವಿರುದ್ಧ ಯುವರಾಜ ಕಾಲೇಜು ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ಮಾಡಿದರು.ಕಾಲೇಜು ಆವರಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರಾಂಶುಪಾಲರಾದ ಸ.ನ.ಗಾಯತ್ರಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಅಂಬೇಡ್ಕರ್ ಸಂಸ್ಮರಣಾ ದಿನಾಚರಣೆ ಆಚರಿಸುವ ಸಲುವಾಗಿ ಪ್ರಾಂಶುಪಾಲರನ್ನು ಭೇಟಿ ಮಾಡಿದ ವಿದ್ಯಾರ್ಥಿಗಳನ್ನು ಅವರು ನಿಂದಿಸಿದರು.ಒಂದೂವರೆ ತಿಂಗಳಿಂದ ಸಂಸ್ಮರಣಾ ದಿನ ಆಚರಿಸಲು ವಿಳಂಬ ಮಾಡಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.ಬಹಳ ವರ್ಷಗಳಿಂದ ಕಾಲೇಜಿನಲ್ಲಿ ಸಂಸ್ಮರಣಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಇದನ್ನು ಎಲ್ಲ ವಿದ್ಯಾರ್ಥಿಗಳು ಒಗ್ಗೂಡಿ ಆಚರಿಸುತ್ತಿದ್ದಾರೆ. ಆದರೆ ಈಗಿನ ಪ್ರಾಂಶುಪಾಲರು ಜಾತಿಯ ಮೇಲೆ ವಿದ್ಯಾರ್ಥಿಗಳನ್ನು ವಿಂಗಡಿಸುತ್ತಿದ್ದಾರೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳ ದನಿಯನ್ನು ಅಡಗಿಸಲು ಪ್ರಾಂಶುಪಾಲರು ಹುನ್ನಾರ ನಡೆಸುತ್ತಿದ್ದಾರೆ. ವಿಶಿಷ್ಟ ಇತಿಹಾಸವನ್ನು ಹೊಂದಿರುವ ಕಾಲೇಜಿಗೆ ಪ್ರಾಂಶುಪಾಲರು ಕಪ್ಪು ಚುಕ್ಕೆಯಂತೆ ಇದ್ದಾರೆ. ಕೂಡಲೇ ಅವರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು.ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ವಿ.ಜಿ.ತಳವಾರ್ ಅವರು ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿ, `ಘಟನೆಗೆ ಸಂಬಂಧಿಸಿದಂತೆ ಪ್ರಾಂಶುಪಾಲರನ್ನು ಕರೆಸಿ ಮಾತನಾಡುತ್ತೇನೆ. ಸಿಂಡಿಕೇಟ್ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸುತ್ತೇನೆ. ದೇಶಕ್ಕೆ ಸಂವಿಧಾನ ನೀಡಿದ ಅಂಬೇಡ್ಕರ್ ಅವರ ಸಂಸ್ಮರಣಾ ದಿನಾಚರಣೆಯನ್ನು ಆಚರಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು~ ಎಂದು ಭರವಸೆ ನೀಡಿದರು.ಬಳಿಕ ಪ್ರತಿಭಟನೆಯನ್ನು ಕೈಬಿಡಲಾಯಿತು. ಕಾಲೇಜು ಆವರಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.