ಮಂಗಳವಾರ, ಮೇ 24, 2022
26 °C

ಪ್ರಾಚೀನ ಸ್ಮಾರಕ ರಕ್ಷಣೆ ಪ್ರತಿಯೊಬ್ಬರ ಕರ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರಾಚೀನ ಸ್ಮಾರಕ ರಕ್ಷಣೆ ಪ್ರತಿಯೊಬ್ಬರ ಕರ್ತ

ಚಳ್ಳಕೆರೆ:  ಭಾರತೀಯ ಪ್ರಾಚೀನ ಸ್ಮಾರಕ ಹಾಗೂ ವಸ್ತುಗಳನ್ನು ಮುಂದಿನ ಪೀಳಿಗೆಗಾಗಿ ಉಳಿಸಿಕೊಂಡು ಹೋಗುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದು ಇಲ್ಲಿನ ಭಾರತೀಯ ಸ್ಟೇಟ್ ಬ್ಯಾಂಕ್ ವ್ಯವಸ್ಥಾಪಕ ಕೆ. ಸೋಮಶೇಖರಪ್ಪ ಅಭಿಪ್ರಾಯಪಟ್ಟರು.ಚಳ್ಳಕೆರೆ ಪಟ್ಟಣದ ಎಚ್‌ಪಿಪಿಸಿ ಕಾಲೇಜಿನಲ್ಲಿ ಶನಿವಾರ ಪ್ರಾಚ್ಯವಸ್ತು ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪರಂಪರೆ ಉಳಿಸಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಚಿತ್ರದುರ್ಗದ ಪ್ರಸಿದ್ಧ ಏಳುಸುತ್ತಿನ ಕೋಟೆ ಸುತ್ತ ಅಕ್ರಮ ಒತ್ತುವರಿ ಆಗಿರುವುದು ಕಾಣಬಹುದಾಗಿದೆ. ಆದ್ದರಿಂದ, ಸಂಬಂಧಿಸಿದ ಇಲಾಖೆಗಳು ಪುರಾತನ ಕಾಲದ ಕೋಟೆಯನ್ನು ರಕ್ಷಿಸಲು ಮುಂದೆ ಬರಬೇಕು. ಅದಕ್ಕೆ ಸಾರ್ವಜನಿಕರು, ಇತಿಹಾಸದ ಬಗ್ಗೆ ಆಸಕ್ತಿ ಇರುವವರು ಸಹಕರಿಸಬೇಕು ಎಂದರು.ಹಿಂದೂ, ಮುಸ್ಲಿಂ, ಬೌದ್ಧ, ಕ್ರೈಸ್ತ ಹೀಗೆ ನಾನಾ ಧರ್ಮಗಳ ಸಂಗಮವಾಗಿರುವ ಭಾರತದಲ್ಲಿ ಎಲ್ಲಾ ಧರ್ಮಗಳೂ ತಮ್ಮ ಪರಂಪರೆಯನ್ನು ಉಳಿಸಿಕೊಂಡು ಬಂದಿವೆ. ಇಂತಹ ಧರ್ಮಗಳ ಸಾರವನ್ನು ಮುಂದಿನ ಪೀಳಿಗೆಗೆ ತಿಳಿಸಬೇಕಾದರೆ ಅವುಗಳನ್ನು ಕಾಪಾಡಿಕೊಂಡು ಹೋಗಬೇಕು. ಪರಂಪರೆಯನ್ನು ರಕ್ಷಿಸುವುದರಿಂದ ಗತಕಾಲದದಲ್ಲಿ ಆಳ್ವಿಕೆ ಮಾಡಿದ ರಾಜ ಮಹಾರಾಜರ ಆಡಳಿತ, ಸಾಮಾಜಿಕ, ಅರ್ಥಿಕ ಹಾಗೂ ಶೈಕ್ಷಣಿಕ ವ್ಯವಸ್ಥೆಗಳ ಕುರಿತ ಮಾಹಿತಿಯನ್ನು ತಿಳಿದು ಪ್ರಸ್ತುತ ಕಾಲಮಾನಕ್ಕೆ ಅಳವಡಿಸಿಕೊಳ್ಳುವ ಅಥವಾ ಬದಲಾವಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಸಹಕಾರಿಯಾಗಿದೆ ಎಂದು ವಿವರಿಸಿದರು.ಪ್ರಾಧ್ಯಾಪಕ ಡಾ.ಕರಿಯಪ್ಪ ಮಾಳಿಗೆ ಮಾತನಾಡಿ, ಶಿಕ್ಷಣ ಪಡೆಯುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಮನೆಗಳ ಪರಂಪರೆಯನ್ನು ತಿಳಿದುಕೊಳ್ಳುವ ಮೂಲಕ ಇದರ ಮಹತ್ವವನ್ನು ಹೆಚ್ಚಿಸಬೇಕಾಗಿದೆ ಎಂದರು.ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಪ್ರೊ.ಸಿ.ಎಂ. ವಿವೇಕಾನಂದ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಅಧ್ಯಕ್ಷೆ ಪಿ. ಶಂಷಾದ್, ಜಾನಪದ ಹಾಡುಗಾರ ಗಂಜಿಗಟ್ಟೆ ಕೃಷ್ಣಮೂರ್ತಿ, ಪ್ರಾಧ್ಯಾಪಕ ಪ್ರೊ.ಈರಣ್ಣ, ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿ ಎಂ. ಶಿವಲಿಂಗಪ್ಪ ಉಪಸ್ಥಿತರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.