ಶನಿವಾರ, ಏಪ್ರಿಲ್ 17, 2021
30 °C

ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಾಯಕನಹಟ್ಟಿ:  ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ ಸ್ಪರ್ಧಾ ಮನೋಭಾವ ಮುಖ್ಯ ಎಂದು ಜಿಲ್ಲಾ ಪಂಚಾಯ್ತಿ ಸದಸ್ಯೆ ಜಯಮ್ಮ ಬಾಲರಾಜ್ ಹೇಳಿದರು.ಇಲ್ಲಿ ಮಂಗಳವಾರ ಪ್ರಾರಂಭವಾದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಉತ್ತಮ ಕ್ರೀಡಾಪಟುಗಳಿರುತ್ತಾರೆ. ಅವರಿಗೆ ಸರಿಯಾದ ಸಮಯಕ್ಕೆ ತರಬೇತಿ ನೀಡಿದರೆ, ದೇಶ ಉತ್ತಮ ಕ್ರೀಡಾ ಪಟುಗಳನ್ನು ಕಾಣುತ್ತದೆ. ಶಿಕ್ಷಕರು ಪಠ್ಯದ ಜತೆಗೆ ಪಠ್ಯೇತರ ಚುಟುವಟಿಕೆಗಳಿಗೆ ಹೆಚ್ಚಿನ ಮಹತ್ವ ನೀಡಬೇಕು ಎಂದರು.ಬಿಇಒ ಡಿ.ಎ. ತಿಮ್ಮಣ್ಣ ಮಾತನಾಡಿ, ಕ್ರೀಡಾಕೂಟ ನಡೆಯುವ ವೇಳೆ ಮಾತ್ರ ಅಭ್ಯಾಸ ಮಾಡದೇ ಸತತ ಅಭ್ಯಾಸ ನಡೆಸಿದರೆ ಜಯ ಸಾಧ್ಯ. ಶಿಕ್ಷಕರು ಮಕ್ಕಳಿಗೆ ಇಲಾಖೆ ನಿಗದಿಪಡಿಸಿದ ಅವಧಿಯಂತೆ ಕ್ರೀಡಾ ಚುವಟಿಕೆಗಳಲ್ಲಿ ಪಾಲ್ಗೊಳ್ಳಲು ಪ್ರೇರೇಪಿಸಬೇಕು ಎಂದರು.ಶಿಕ್ಷಣ ಸಂಯೋಜಕ ಜಕಣಾಚಾರಿ, ಕ್ಷೇತ್ರ ಸಮನ್ವಯಾಧಿಕಾರಿ ಸಿ.ಎಸ್. ವೆಂಕಟೇಶ್ ಕ್ರೀಡಾಜ್ಯೋತಿ ಸ್ವೀಕರಿಸಿದರು.ದೈಹಿಕ ಶಿಕ್ಷಕ ತಿಪ್ಪೇಸ್ವಾಮಿ ಪ್ರತಿಜ್ಞಾ ವಿಧಿ ಬೋಧಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ನಿರ್ದೇಶಕ ತಿಪ್ಪೇಸ್ವಾಮಿ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಸುಖಪುತ್ರಪ್ಪ, ಈಶ್ವರಪ್ಪ, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಜಿ.ಟಿ. ಸ್ವಾಮಿ, ಉಮೇಶ್ ಹಾಗೂ ಶಿಕ್ಷಕರು ಹಾಜರಿದ್ದರು.

ಜನಾರ್ದನರೆಡ್ಡಿ ಕಾರ್ಯಕ್ರಮ ನಿರೂಪಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.