ಗುರುವಾರ , ಏಪ್ರಿಲ್ 22, 2021
27 °C

ಪ್ರಾಧ್ಯಾಪಕರಿಗೆ ಸಿಂಡಿಕೇಟ್ ಸದಸ್ಯರಿಂದ ಕಿರುಕುಳ - ಪ್ರೊ.ಬಿಕೆಸಿ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿ ಮತ್ತು ಸಂಘ ಪರಿವಾರಕ್ಕೆ ಸೇರಿದವರೇ ಹೆಚ್ಚಿನ ಸಂಖ್ಯೆಯಲ್ಲಿ ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಸದಸ್ಯರಾಗಿದ್ದು, ಅವರೆಲ್ಲ ಪ್ರಗತಿಪರ ನಿಲುವಿನ ಪ್ರಾಧ್ಯಾಪಕರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಪ್ರೊ.ಬಿ.ಕೆ. ಚಂದ್ರಶೇಖರ್ ಆರೋಪಿಸಿದರು.ಕುವೆಂಪು ವಿ.ವಿ.ಯ ಪ್ರೊ.ರಾಜೇಂದ್ರ ಚೆನ್ನಿ ಹಾಗೂ ಹಂಪಿ ವಿ.ವಿ.ಯ ಪ್ರೊ.ಟಿ.ಆರ್. ಚಂದ್ರಶೇಖರ್ ಅವರಿಗೆ ಅಲ್ಲಿನ ಕೆಲವು ಸಿಂಡಿಕೇಟ್ ಸದಸ್ಯರು ಕಿರುಕುಳ ನೀಡುತ್ತಿದ್ದಾರೆ. ಈ ವಿಷಯವನ್ನು ರಾಜ್ಯಪಾಲರ ಗಮನಕ್ಕೂ ತರಲಾಗಿದೆ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಕಿರುಕುಳ ನೀಡುತ್ತಿರುವ ಸಿಂಡಿಕೇಟ್ ಸದಸ್ಯರ ಹೆಸರನ್ನು ಬಹಿರಂಗಪಡಿಸಲು ನಿರಾಕರಿಸಿದ ಅವರು, ಕರ್ನಾಟಕ ವಿಶ್ವವಿದ್ಯಾಲಯಗಳ ಕಾಯ್ದೆ ಪ್ರಕಾರ ಸಿಂಡಿಕೇಟ್ ಸದಸ್ಯರಾಗುವವರು ಶಿಕ್ಷಣ ತಜ್ಞರಾಗಿರಬೇಕು ಇಲ್ಲವೇ ಆ ಕ್ಷೇತ್ರದಲ್ಲಿ  ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು.ಆದರೆ ಬಿಜೆಪಿ ಸರ್ಕಾರ ಈ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ತಮಗೆ ಬೇಕಾದವರನ್ನು ಸಿಂಡಿಕೇಟ್ ಸದಸ್ಯರನ್ನಾಗಿ ನೇಮಕ ಮಾಡಿದೆ ಎಂದು ದೂರಿದರು.

ತುಮಕೂರು ವಿ.ವಿ ಘಟಿಕೋತ್ಸವ ಸಮಾರಂಭವನ್ನು ತುಮಕೂರಿನಲ್ಲಿ ಏರ್ಪಡಿಸದೆ ರಾಜಭವನದ ಗಾಜಿನ ಮನೆಯಲ್ಲಿ ನಡೆಸಿರುವುದು ಸರಿಯಲ್ಲ ಎಂದರು.ವಿಶ್ವವಿದ್ಯಾಲಯಗಳಲ್ಲಿ ಕುಲಪತಿ ಹಾಗೂ ಕುಲಸಚಿವರ ನಡುವೆ ಸಮನ್ವಯ ಇಲ್ಲದಿರುವುದರಿಂದ ವಿ.ವಿ.ಯ ಅಭಿವೃದ್ಧಿಗೆ ತೊಡಕಾಗಿದೆ. ವಿಶ್ವವಿದ್ಯಾಲಯಗಳ ಕಾಯ್ದೆಗೆ ತಿದ್ದುಪಡಿ ತಂದು ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.