ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ: ಸಚಿವ ರೆಡ್ಡಿ

7

ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ: ಸಚಿವ ರೆಡ್ಡಿ

Published:
Updated:

ಬೆಂಗಳೂರು: ‘ಸಾರಿಗೆ ಸಂಸ್ಥೆಗಳಲ್ಲಿ ಉದ್ಯೋಗ ಮಾಡುತ್ತಿರುವ ಎಲ್ಲ ವರ್ಗದ ಜನರಿಗೆ ನ್ಯಾಯ ಒದಗಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಕಾರ್ಮಿಕರು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದರೆ ಸಾರಿಗೆ ಸಂಸ್ಥೆಗಳು ಲಾಭದ ಹಾದಿಯಲ್ಲಿ ಮುನ್ನಡೆಯ­ಲಿವೆ’ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.ಕೆಎಸ್‌ಆರ್‌ಟಿಸಿ ನಿಗಮಗಳ ಪರಿ­ಶಿಷ್ಟ ಜಾತಿ ಹಾಗೂ ಪಂಗಡಗಳ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಪುರಭವನದಲ್ಲಿ ಮಂಗಳವಾರ ನಡೆದ ಸಂಘದ ಎರಡನೇ ವಾರ್ಷಿಕೋತ್ಸವ ಹಾಗೂ ‘ಪಾರಿಜಾತ’ ವಾರ್ಷಿಕ ಡೈರಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.ಸಮಾಜ ಕಲ್ಯಾಣ ಸಚಿವ ಆಂಜನೇಯ ಮಾತನಾಡಿ, ‘ಕೆಎಸ್‌ ಆರ್‌ಟಿಸಿಯಲ್ಲಿ 1992ರ ನೇಮಕಾತಿ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಅನ್ಯಾಯವಾಗಿದೆ ಎಂಬ ಬಗ್ಗೆ ಮನವಿ ಬಂದಿದೆ. ಈ ಬಗ್ಗೆ ಸಾರಿಗೆ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆಗೆ ಸಮಾಲೋಚಿಸಿ ಪರಿಹರಿಸ ಲಾಗುವುದು’ ಎಂದು ಭರವಸೆ ನೀಡಿದರು.ಕೆಎಸ್‌ಆರ್‌ಟಿಸಿ ಪ್ರಧಾನ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ಯಲ್ಲಪ್ಪ ಕೆ.ಕೆ.ಪುರ ಮತ್ತಿತರರು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry