ಮಂಗಳವಾರ, ಮೇ 17, 2022
23 °C

ಪ್ರಾಮಾಣಿಕ ಶ್ರಮದಿಂದ ಗ್ರಾಮೀಣಾಭಿವೃದ್ಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಳಲ್ಕೆರೆ: ಭ್ರಷ್ಟಾಚಾರ ನಿರ್ಮೂಲನೆಯಿಂದ ಮಾತ್ರ ಗ್ರಾಮೀಣಾಭಿವೃದ್ಧಿ ಸಾಧ್ಯ ಎಂದು ಜಿ.ಪಂ. ಅಧ್ಯಕ್ಷ ಸಿ. ಮಹಾಲಿಂಗಪ್ಪ ಅಭಿಪ್ರಾಯಪಟ್ಟರು.

ಪಟ್ಟಣದ ಶಿಕ್ಷಕರ ಸದನದಲ್ಲಿ ಕ್ಷೇತ್ರ ಪ್ರಚಾರ ನಿರ್ದೇಶನಾಲಯ, ಜಿ.ಪಂ., ವಾರ್ತಾ ಇಲಾಖೆ ಹಾಗೂ ತಾ.ಪಂ. ಆಶ್ರಯದಲ್ಲಿ ಶುಕ್ರವಾರ ನಡೆದ ಗ್ರಾಮೀಣಾಭಿವೃದ್ಧಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ನಡೆಯುತ್ತಿರುವ ಹಲವು ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ ಸರಿಯಿಲ್ಲ ಎಂದು ದೂರುಗಳು ಬಂದಿವೆ. ಎಲ್ಲ ಹಂತಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಗುಣಮಟ್ಟದ ಕಾಮಗಾರಿ ನಡೆಯುತ್ತಿಲ್ಲ. ಕೆಲವು ಯೋಜನೆಗಳ ಅನುದಾನ ಬಳಕೆಯಾಗದೆ ವಾಪಸ್ ಹೋಗುತ್ತಿದೆ. ಈ ಬಗ್ಗೆ ಪರಿಶೀಲನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು, ರಸ್ತೆ, ಚರಂಡಿ ಮತ್ತಿತರ ಮೂಲ ಸೌಕರ್ಯಗಳನ್ನು ಒದಗಿಸಬೇಕಿದೆ. ಜನಪ್ರತಿನಿಧಿಗಳು ಮತ್ತು ಅನುಷ್ಠಾನ ಅಧಿಕಾರಿಗಳು ನಿಷ್ಠೆ, ಪ್ರಾಮಾಣಿಕತೆಯಿಂದ ಕೆಲಸ ಮಾಡುವುದರಿಂದ ಮಾತ್ರ ಉತ್ತಮ ಅಭಿವೃದ್ಧಿ ನಿರೀಕ್ಷಿಸಬಹುದಾಗಿದೆ. ಹಳ್ಳಿಗಳಲ್ಲಿ ಶೌಚಾಲಯ ನಿರ್ಮಿಸಲು ಸಾಕಷ್ಟು ಅನುದಾನ ಲಭ್ಯವಿದ್ದು, ಅದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ಮಾಡಿದರು.ತಾ.ಪಂ. ಅಧ್ಯಕ್ಷೆ ಪ್ರೇಮಾ ಧನಂಜಯ ಅಧ್ಯಕ್ಷತೆ ವಹಿಸಿದ್ದರು. ನಾಗರಾಜ ಸಂಗಂ ಗ್ರಾಮೀಣಾಭಿವೃದ್ಧಿ ಕುರಿತು ಮಾಹಿತಿ ನೀಡಿದರು.ಜಿ.ಪಂ. ಸದಸ್ಯರಾದ ಶಿವಕುಮಾರ್, ಇಂದಿರಾ ಕಿರಣ್, ಭಾರತೀ ಕಲ್ಲೇಶ್, ಪಾರ್ವತಮ್ಮ, ರಂಗಸ್ವಾಮಿ, ತಾ.ಪಂ. ಉಪಾಧ್ಯಕ್ಷೆ ಪುಟ್ಟೀಬಾಯಿ, ತಾ.ಪಂ. ಸದಸ್ಯರು ಉಪಸ್ಥಿತರಿದ್ದರು.

ಕ್ಷೇತ್ರ ಪ್ರಚಾರ ಅಧಿಕಾರಿ ತುಕಾರಾಂ ಗೌಡ ಸ್ವಾಗತಿಸಿದರು. ರಾಮಕೃಷ್ಣಪ್ಪ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.