ಪ್ರಾಸಿಕ್ಯೂಷನ್ ಸಾಕ್ಷಿಯಾಗಿ ಬನ್ಸಲ್
ನವದೆಹಲಿ (ಪಿಟಿಐ): ರೈಲ್ವೆ ಇಲಾಖೆಯಲ್ಲಿ ನಡೆದ ಲಂಚ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ರೈಲ್ವೆ ಸಚಿವ ಪವನ್ ಕುಮಾರ್ ಬನ್ಸಲ್ ಅವರ ಅಳಿಯ ವಿಜಯ್ ಸಿಂಗ್ಲ ಮತ್ತು ಇತರ ಒಂಬತ್ತು ಜನರ ವಿರುದ್ಧ ಸಿಬಿಐ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ.
ಮಾಜಿ ಸಚಿವ ಪವನ್ ಕುಮಾರ್ ಬನ್ಸಲ್ ಸೇರಿದಂತೆ 90 ಜನ ಸಾಕ್ಷಿಗಳನ್ನು ಒಳಗೊಂಡ ಪಟ್ಟಿಯನ್ನು ಸಲ್ಲಿಸಿದೆ. ಬನ್ಸಲ್ ಪ್ರಾಸಿಕ್ಯೂಷನ್ ಪರ ಸಾಕ್ಷಿಯಾಗಿ ಹಾಜರಾಗಲಿದ್ದು, ಅವರನ್ನು 39ನೇ ಸಾಕ್ಷಿ ಎಂದು ಸಿಬಿಐ ಹೆಸರಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.