ಶನಿವಾರ, ನವೆಂಬರ್ 23, 2019
17 °C
ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ

ಪ್ರಿಯಕರ ಸೇರಿ ಮೂವರ ಬಂಧನ

Published:
Updated:

ಬೆಂಗಳೂರು: ನರ್ಸಿಂಗ್ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಆಕೆಯ ಪ್ರಿಯಕರ ಸೇರಿದಂತೆ ಮೂವರು ಆರೋಪಿಗಳನ್ನು ನಗರದ ಕೇಂದ್ರ ವಿಭಾಗದ ಪೊಲೀಸರು ಗುರುವಾರ ಬಂಧಿಸಿದ್ದಾರೆ.ಈ ಸಂಬಂಧ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಏಪ್ರಿಲ್.22 ರಂದು ಅಶೋಕನಗರ ಠಾಣೆಗೆ ದೂರು ಕೊಟ್ಟಿದ್ದರು. ಆ ದೂರಿನ ಅನ್ವಯ ಕೇರಳದ ಅಲೆಪ್ಪಿ ಜಿಲ್ಲೆಯ ಶ್ರೀಕಾಂತ್ (24), ವಿನೋದ್ (25) ಮತ್ತು ನಿತಿನ್ ವರ್ಗಿಸ್ (24) ಎಂಬುವರನ್ನು ಬಂಧಿಸಲಾಗಿದೆ. ವಿದ್ಯಾರ್ಥಿನಿ ಕೂಡ ಶ್ರೀಕಾಂತ್‌ನ ಊರಿನವಳೇ ಆಗಿದ್ದರಿಂದ ಆಕೆಗೆ ಆತನ ಪರಿಚಯವಿತ್ತು. ನಾಲ್ಕು ತಿಂಗಳಿನಿಂದ ಪರಸ್ಪರರು ಪ್ರೀತಿ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.ಶ್ರೀಕಾಂತ್ ಕೇರಳದಲ್ಲಿ ಮೊಬೈಲ್ ಮಾರಾಟ ಅಂಗಡಿ ಇಟ್ಟುಕೊಂಡಿದ್ದಾನೆ. ವಿನೋದ್ ಕೂಡ ಕೇರಳದ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ಎರಡು ವರ್ಷಗಳ ಹಿಂದೆ ನಗರಕ್ಕೆ ಬಂದಿರುವ ನಿತಿನ್, ಹೊಸಕೋಟೆಯಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ಸ್ಟಾಫ್ ನರ್ಸ್ ಆಗಿದ್ದಾನೆ. ಆತ ದಂಡುಪಾಳ್ಯದಲ್ಲಿ ಬಾಡಿಗೆ ಮನೆ ಪಡೆದು ವಾಸ ಮಾಡುತ್ತಿದ್ದಾನೆ.ವಾರದ ಹಿಂದೆ ನಗರಕ್ಕೆ ಬಂದ ಶ್ರೀಕಾಂತ್ ಮತ್ತು ವಿನೋದ್, ದಂಡುಪಾಳ್ಯದಲ್ಲಿರುವ ಸ್ನೇಹಿತ ನಿತಿನ್ ಮನೆಯಲ್ಲೇ ಉಳಿದುಕೊಂಡಿದ್ದರು. ಭಾನುವಾರ ಬೆಳಿಗ್ಗೆ ಪ್ರೇಯಸಿಯ ಮೊಬೈಲ್‌ಗೆ ಕರೆ ಮಾಡಿದ ಶ್ರೀಕಾಂತ್, ದಂಡುಪಾಳ್ಯಕ್ಕೆ ಬರುವಂತೆ ಹೇಳಿದ್ದಾನೆ. ಪ್ರಿಯಕರನ ಮಾತಿನಂತೆ ಅಲ್ಲಿಗೆ ಹೋದ ವಿದ್ಯಾರ್ಥಿಯನ್ನು ಸ್ನೇಹಿತನ ಮನೆಗೆ ಕರೆದುಕೊಂಡು ಹೋಗಿದ್ದಾನೆ.ಈ ವೇಳೆ ವಿದ್ಯಾರ್ಥಿನಿ ಸೇರಿದಂತೆ ಎಲ್ಲರೂ ಒಟ್ಟಿಗೆ ಮದ್ಯಪಾನ ಮಾಡಿದ್ದಾರೆ. ಕುಡಿದ ಅಮಲಿನಲ್ಲಿ ಆರೋಪಿಗಳು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಮುಂದಾಗಿದ್ದಾರೆ. ಇದಕ್ಕೆ ಪ್ರತಿರೋಧ ತೋರಿದ ವಿದ್ಯಾರ್ಥಿನಿಗೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.ಪ್ರಿಯಕರ ಸೇರಿ ಮೂವರ ಬಂಧನ

`ಪರಿಚಯವನ್ನು ದುರುಪಯೋಗಪಡಿಸಿಕೊಂಡ ದುಷ್ಕರ್ಮಿಗಳು ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಆಕೆಯ ಮೇಲೆ ಅತ್ಯಾಚಾರ ನಡೆದಿದೆಯೇ ಎಂಬುದು ವಿಧಿವಿಜ್ಞಾನ ಪ್ರಯೋಗಾಲಯದ  ತಜ್ಞರು ವರದಿ ನೀಡಿದ ಬಳಿಕ ಗೊತ್ತಾಗಲಿದೆ. ಬಂಧಿತರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ಪಡೆಯಲಾಗುವುದು' ಎಂದು ಕೇಂದ್ರ ವಿಭಾಗದ ಡಿಸಿಪಿ ಬಿ.ಆರ್. ರವಿಕಾಂತೇಗೌಡ `ಪ್ರಜಾವಾಣಿ'ಗೆ ತಿಳಿಸಿದರು.ಗೊಂದಲಕ್ಕೀಡಾದ ವಿದ್ಯಾರ್ಥಿನಿ

`ಭಾನುವಾರ ಬೆಳಿಗ್ಗೆ 8.50ರ ಸುಮಾರಿಗೆ ಸೇಂಟ್ ಫಿಲೋಮಿನಾ ಆಸ್ಪತ್ರೆ ಬಸ್ ನಿಲ್ದಾಣದಲ್ಲಿ ನಿಂತಿದ್ದೆ. ಈ ವೇಳೆ ಬಿಳಿ ಬಣ್ಣದ ಸ್ಕಾರ್ಪಿಯೊ ಕಾರಿನಲ್ಲಿ ಬಂದ ಮೂವರು ಅಪರಿಚಿತರು, ವಿಳಾಸ ಕೇಳುವ ನೆಪದಲ್ಲಿ ಹತ್ತಿರ ಬಂದು ನನ್ನನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದರು ಎಂದು ವಿದ್ಯಾರ್ಥಿನಿ ದೂರು ಕೊಟ್ಟಿದ್ದಳು.ಆದರೆ, ವಿದ್ಯಾರ್ಥಿನಿಯ ಮೊಬೈಲ್ ಅನ್ನು ಪರಿಶೀಲಿಸಿದಾಗ ಭಾನುವಾರ ಬೆಳಿಗ್ಗೆ 8 ಗಂಟೆಯಿಂದ 8.50ರ ಅಂತರದಲ್ಲಿ ಶ್ರೀಕಾಂತ್‌ನಿಂದ ಏಳು ಕರೆಗಳು ಬಂದಿದ್ದವು. ಆತನ ಬಗ್ಗೆ ವಿಚಾರಿಸಿದಾಗ ವಿದ್ಯಾರ್ಥಿನಿ ಗೊಂದಲಕ್ಕೀಡಾಗಿ ಯಾವುದೇ ಮಾಹಿತಿ ನೀಡಲಿಲ್ಲ. ಆ ಮೊಬೈಲ್ ಸಂಖ್ಯೆಯಿಂದ ದೊರೆತ ಸುಳಿವನ್ನೇ ಆಧರಿಸಿ ಆರೋಪಿಗಳನ್ನು ಪತ್ತೆ ಮಾಡಲಾಯಿತು' ಎಂದು ಹಿರಿಯ ಅಧಿಕಾರಿಗಳು ತಿಳಿಸಿದರು.

ಪ್ರತಿಕ್ರಿಯಿಸಿ (+)