ಗುರುವಾರ , ಮೇ 28, 2020
27 °C

ಪ್ರಿಯಾಂಕಾ ಚೋಪ್ರಾ, ಕತ್ರೀನಾ ಮನೆ ಮೇಲೆ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಐಎಎನ್‌ಎಸ್): ಬಾಲಿವುಡ್‌ನ ಖ್ಯಾತ ನಟಿಯರಾದ ಕತ್ರೀನಾ ಕೈಫ್ ಮತ್ತು ಪ್ರಿಯಾಂಕಾ ಚೋಪ್ರಾ ಅವರ ಕಚೇರಿ ಮತ್ತು ಮನೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಸೋಮವಾರ ಬೆಳಿಗ್ಗೆ ದಾಳಿ ನಡೆಸಿದರು. ಅಧಿಕಾರಿಗಳು ಬೆಳಿಗ್ಗೆ ಸುಮಾರು 7.30ರ ವೇಳೆಗೆ ನಟಿಯರ ಮನೆಗಳು ಸೇರಿದಂತೆ 12 ಕಡೆ  ಏಕಕಾಲದಲ್ಲಿ ದಾಳಿ ನಡೆಸಿದರು. ಅಷ್ಟೇ ಅಲ್ಲದೆ, ನಟಿಯರ ಕಾರ್ಯದರ್ಶಿಗಳ ಮನೆಗಳು, ಕಚೇರಿಗಳು ಮತ್ತು ಇತರ ಸ್ಥಳಗಳ ಮೇಲೆಯೂ ದಾಳಿ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದರು.ಈ ನಟಿಯರು ಕಳೆದ ವರ್ಷಗಳಲ್ಲಿ ತಮ್ಮ ಆದಾಯಕ್ಕೆ ಸಮನಾಗಿ ತೆರಿಗೆಯನ್ನು ಪಾವತಿಸಿದ್ದಾರೆಯೇ ಎನ್ನುವುದನ್ನು ಇಲಾಖೆ ತನಿಖೆ ನಡೆಸುತ್ತಿದೆ. ಕತ್ರೀನಾ ಮತ್ತು ಪ್ರಿಯಾಂಕಾ ಅವರು ಸಿನಿಮಾಗಳಲ್ಲಿ ಮಾತ್ರವಲ್ಲದೆ ಕೆಲವು ಕಂಪನಿಗಳ ಬ್ರಾಂಡ್ ಬಾಸಿಡರ್‌ಗಳಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಜೊತೆಗೆ ಭಾರತ ಮಾತ್ರವಲ್ಲ, ವಿದೇಶದಲ್ಲಿಯೂ ಸ್ಟೇಜ್ ಶೋಗಳಲ್ಲಿ ಭಾಗವಹಿಸುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.