ಪ್ರೊಬೇಸ್-12 ಉದ್ಘಾಟನೆ

ಶುಕ್ರವಾರ, ಜೂಲೈ 19, 2019
23 °C

ಪ್ರೊಬೇಸ್-12 ಉದ್ಘಾಟನೆ

Published:
Updated:

ಮೈಸೂರು: `ಉತ್ತಮ ಸಮಾಜ ನಿರ್ಮಾಣ ಕಾರ್ಯದಲ್ಲಿ ಸಾಮಾಜಿಕ ಕಾರ್ಯಕರ್ತರ ಪಾತ್ರ ಪ್ರಮುಖ~ ಎಂದು ನಗರ ಪೊಲೀಸ್ ಆಯುಕ್ತ ಕೆ.ಎಸ್. ಸುಧೀರ್ ಹೇಳಿದರು.ನಗರದ ವಿವೇಕಾನಂದ ಇನ್‌ಸ್ಟಿಟ್ಯೂಟ್ ಫಾರ್ ಲೀಡರ್‌ಶಿಫ್ ಡೆವಲಪ್‌ಮೆಂಟ್ (ವಿ-ಲೀಡ್) ಆವರಣದಲ್ಲಿ ಸೋಮವಾರ ಆಯೋ ಜಿದ್ದ `ಪ್ರೊಬೇಸ್-12~ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಕುಟುಂಬದಲ್ಲಿ ಮೌಲ್ಯಗಳು ಮರೆಯಾಗುತ್ತಿವೆ. ಇದು ಸಾಮಾಜಿಕ ಸ್ಥಿತಿಯ ಮೇಲೆ ಪರಿಣಾಮ ಬೀರುತ್ತಿದೆ. ಇದನ್ನು ನಿವಾರಿಸುವ ನಿಟ್ಟಿನಲ್ಲಿ `ವೀ-ಲೀಡ್~ ಸಂಸ್ಥೆ ಸಮು ದಾಯ ಮತ್ತು ಯುವಕರ ಅಭಿವೃದ್ಧಿಯಲ್ಲಿ ಸಾಕಷ್ಟು ಸೇವೆ ಸಲ್ಲಿಸುತ್ತಿದೆ ಎಂದು ತಿಳಿಸಿದರು.ರಾಜ್ಯದ ವಿವಿಧ ವಿಶ್ವವಿದ್ಯಾಲ ಯಗಳ ಸಮಾಜ ಕಾರ್ಯ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸಾಮಾಜಿಕ ಅಭಿವೃದ್ಧಿ ವಿಷಯಗಳ ಬಗ್ಗೆ `ವೀ-ಲೀಡ್~ನಲ್ಲಿ ಪ್ರಾಯೋಗಿಕ ಅಧ್ಯಯನ ಕೈಗೊಂಡಿದ್ದಾರೆ. ಈ ಶಿಬಿರ ಜುಲೈ 31ರ ವರೆಗೆ ನಡೆಯಲಿದೆ.ಉದ್ಘಾಟನಾ ಸಮಾರಂಭದಲ್ಲಿ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥಾಪಕ ಡಾ. ಆರ್. ಬಾಲಸುಬ್ರಹ್ಮಣ್ಯಂ, ನಿರ್ದೇಶಕ ಸುದರ್ಶನ ಇತರರು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry