ಮಂಗಳವಾರ, ಏಪ್ರಿಲ್ 13, 2021
32 °C

ಪ್ರೊ. ನಂಜುಂಡಸ್ವಾಮಿ ಹೋರಾಟ ಅವಿಸ್ಮರಣೀಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಂಧನೂರು: ತಾಲ್ಲೂಕಿನ ರೈತರ ಹಿತಕ್ಕಾಗಿ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರು ಮಾಡಿದ ಹೋರಾಟದ ನೆನಪುಗಳು ಅವಿಸ್ಮರಣೀಯ. ರೈತರಿಗಾಗಿ ಅವರು ನಡೆಸಿದ ಹೋರಾಟದ ಹಾದಿ ನಮಗೆಲ್ಲ ಮಾರ್ಗದರ್ಶವಾಗಿದೆ ಎಂದು ಹಿರಿಯ ರೈತ ಮುಖಂಡ ಹನುಮನಗೌಡ ಬೆಳಗುರ್ಕಿ ಅಭಿಪ್ರಾಯಪಟ್ಟರು.ತಾಲ್ಲೂಕಿನ ಅಲಬನೂರು ಗ್ರಾಮದ ವೃತ್ತದಲ್ಲಿ ಅಳವಡಿಸಲಾಗಿರುವ ಪ್ರೊ.ಎಂ.ಡಿ.ನಂಜುಂಡಸ್ವಾಮಿ ನಾಮಫಲಕವನ್ನು ಈಚೆಗೆ ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ವರ್ಷಗಳಲ್ಲಿ ಕೃಷಿ ಚಟುವಟಿಕೆಗಳು ಕುಂಠಿತವಾಗುತ್ತಿದ್ದು ಯುವಕರು ಕೃಷಿಯ ಕಡೆಗೆ ಹೆಚ್ಚಿನ ಆಸಕ್ತಿಯನ್ನು ತೋರಬೇಕು. ಆ ಮೂಲಕ ಕೃಷಿ ಕ್ರಾಂತಿಗೆ ಚಾಲನೆ ನೀಡಬೇಕು ಎಂದು ಸಲಹೆ ನೀಡಿದರು.ರೈತ ಮುಖಂಡ ಶರಣೇಗೌಡ ಗೊರೇಬಾಳ ಮಾತನಾಡಿ ರೈತನ ಸ್ಥಿತಿ-ಗತಿಗಳನ್ನು ಹತ್ತಿರದಿಂದ ನೋಡಿದ್ದ ನಂಜುಂಡಸ್ವಾಮಿ ಅವರು ರೈತರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬೇಕೆಂಬ ಆಶಯವನ್ನು ಹೊಂದಿದ್ದರು. ಜಾತಿವಾರು ಸಂಘಟನೆಗಳು ತಲೆ ಎತ್ತುತ್ತಿರುವ ಈ ಸಂದರ್ಭದಲ್ಲಿ ಹೋರಾಟ, ಪ್ರತಿಭಟನೆಗಳು ತಮ್ಮ ಮೌಲ್ಯವನ್ನು ಕಳೆದುಕೊಳ್ಳುತ್ತಿವೆ. ಸಮಾಜದ ಅಶಾಂತಿಗೂ ಅವು ಕಾರಣವಾಗುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದರು.ಕಾಂಗ್ರೆಸ್ ಮುಖಂಡ ಮಲ್ಲನಗೌಡ ಕನ್ನಾರಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎನ್.ಶಿವನಗೌಡ ಗೊರೇಬಾಳ, ತಾಲ್ಲೂಕು ಪಂಚಾಯಿತಿ ಸದಸ್ಯ ನಾಗಪ್ಪ ಗೋಮರ್ಸಿ, ಮುಖಂಡರಾದ ತಿರುಪತಿ ಆಶಣ್ಣನವರ್, ಗ್ರಾಮ ಪಂಚಾಯಿತಿ ಸದಸ್ಯರಾದ ಮಾನಪ್ಪ, ಆರ್.ಮಲ್ಲಿಕಾರ್ಜುನ, ಇ.ಅಮರೇಶ, ಮಂಜುನಾಥ, ರೈತ ಮುಖಂಡರಾದ ಆರ್.ಚನ್ನಬಸಪ್ಪ, ಪಂಪಯ್ಯಸ್ವಾಮಿ, ಹನುಮಂತಪ್ಪ ವೆಂಗಿ, ಪ್ಯಾಟಿ ಪಂಪನಗೌಡ ಮತ್ತಿತರರು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.