ಮಂಗಳವಾರ, ಮೇ 11, 2021
19 °C

ಪ್ರೌಢಶಾಲೆಗಳಲ್ಲಿ ಲೈಂಗಿಕ ಶಿಕ್ಷಣ ಮುಂದಿನ ವರ್ಷದಿಂದ ಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: `ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಪ್ರೌಢಶಾಲೆಗಳಲ್ಲಿ ಲೈಂಗಿಕ ಶಿಕ್ಷಣವನ್ನು ನೀಡಲಾಗುವುದು' ಎಂದು ರಾಜ್ಯ ಮಾನಸಿಕ ಆರೋಗ್ಯ ಕಾರ್ಯಪಡೆ ಅಧ್ಯಕ್ಷ ಡಾ. ಅಶೋಕ್ ಪೈ ತಿಳಿಸಿದರು.ಮಣಿಪಾಲದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಮಾಹಿತಿ ನೀಡಿ, ಶಾಲೆಗಳಲ್ಲಿ ಲೈಂಗಿಕ ಶಿಕ್ಷಣ ನೀಡಲು ಪಠ್ಯ ಪುಸ್ತಕಗಳು ಸಿದ್ಧಗೊಂಡಿವೆ. ಈ ಬಗ್ಗೆ ಶಾಲಾ ಶಿಕ್ಷಕರಿಗೆ ತರಬೇತಿ ನೀಡಬೇಕಾಗಿದೆ. ಮಕ್ಕಳು ತಮ್ಮ ಲೈಂಗಿಕ ಸಮಸ್ಯೆಗಳಿಗೆ ಆಸ್ಪತ್ರೆಗಳಿಗೆ ಹೋಗುವುದನ್ನು ತಡೆಯಲು ಶಾಲಾ ಶಿಕ್ಷಕರನ್ನೇ ಆಪ್ತ ಸಲಹೆಗಾರರನ್ನಾಗಿಸಲು ಅವರಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದರು.ಬೆಂಗಳೂರು ಸಿಲಿಕಾನ್ ಸಿಟಿ ಎಂದು ವಿಶ್ವದಲ್ಲಿ ಹೆಸರು ಪಡೆದಿದೆ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿರುವ ಜನರು ಮಾನಸಿಕ ಮಸ್ಯೆಗಳಿಂದ ಮತ್ತು ಒತ್ತಡಗಳಿಂದ ಜೀವಿಸುತ್ತಿದ್ದಾರೆ. ಮುಂದಿನ 2 ವರ್ಷಗಳಲ್ಲಿ ಬೆಂಗಳೂರು ವಿಶ್ವದ ಆತ್ಮಹತ್ಯೆ ರಾಜಧಾನಿ ಎನಿಸಿಕೊಳ್ಳಲಿದೆ. ವಿಶ್ವ ಆರೋಗ್ಯ ಸಂಸ್ಥೆ ವರದಿಯಂತೆ ಅಪಘಾತ ಮತ್ತು ಇತರೆ ಕಾಯಿಲೆಗಳಿಂದ ಸಾಯುವವರಿಗಿಂತ ಹೆಚ್ಚು ಮಂದಿ ಖಿನ್ನತೆ ಮತ್ತು ಆತ್ಮಹತ್ಯೆಗಳಿಂದ ಸಾಯುತ್ತಿದ್ದಾರೆ ಎಂದು  ಮಾಹಿತಿ ನೀಡಿದರು.ರಾಜ್ಯದಲ್ಲಿ ಮಾನಸಿಕ ವೈದ್ಯರ ಕೊರತೆ ಇದೆ. ನೇಮಕಕ್ಕೆ ಸೂಕ್ತ ಅಭ್ಯರ್ಥಿಗಳು ಸಿಗುತ್ತಿಲ್ಲ ಎಂದು ವಿಷಾದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.