ತಿ.ನರಸೀಪುರ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಕಟ್ಟಡದ ಸುತ್ತ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಎನ್.ಎಸ್.ಬಸವರಾಜು ಬುಧವಾರ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಪಟ್ಟಣ ಪಂಚಾಯಿತಿಯಲ್ಲಿನ ಶೇ 22.75 ರ ಮೀಸಲು ಅನುದಾನ 33 ಲಕ್ಷ ರೂಪಾಯಿಗಳಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಳಕೆ ಮಾಡಲಾಗುತ್ತಿದೆ. ಪ್ರೌಢಶಾಲೆಗೆ 8 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸ್ಮಶಾನ ಅಭಿವೃದ್ಧಿ ಮತ್ತು ಕಾಂಪೌಂಡ್ ನಿರ್ಮಾಣ, ಒಂದೇ ವಾರ್ಡಿನಲ್ಲಿ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಉದ್ಯಾನವನ ನಿರ್ಮಾಣದ ಕಾಮಗಾರಿಗಳನ್ನು ಮಾಡಲಾಗುವುದು ಎಂದು ತಿಳಿಸಿದರು.

ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಮಲ್ಲಿಕಾರ್ಜುನ, ಮುಖ್ಯಾಧಿಕಾರಿ ವಿ.ಟಿ.ವಿಲ್ಸನ್, ಮಾಜಿ ಅಧ್ಯಕ್ಷ ಎಸ್. ನಂಜುಂಡಸ್ವಾಮಿ, ಸದಸ್ಯರಾದ ಮಲ್ಲೇಶ್, ರೇಣುಕಾರಾಮು, ಪುಟ್ಟೀರಮ್ಮ, ಸುಶೀಲಮ್ಮ, ಶಿವರಾಜು, ಚಾಮಮ್ಮ, ಮುಖಂಡರಾದ ಕನಕರಾಜು, ಕುರುಬೂರು ನಂದೀಶ್, ಮುಖ್ಯ ಶಿಕ್ಷಕ ರವೀಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.