ಪ್ರೌಢಶಾಲೆ ಕೊಠಡಿಗೆ ಶಂಕುಸ್ಥಾಪನೆ

ಶನಿವಾರ, ಜೂಲೈ 20, 2019
24 °C

ಪ್ರೌಢಶಾಲೆ ಕೊಠಡಿಗೆ ಶಂಕುಸ್ಥಾಪನೆ

Published:
Updated:

ಹೊಸಕೋಟೆ: ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಯೋಜನೆ ಅಡಿಯಲ್ಲಿ ಬಾಲಕರ ಹಾಗೂ ಬಾಲಕಿಯರ ಸರ್ಕಾರಿ ಪ್ರೌಢಶಾಲೆಗೆ 1 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸುವ 24 ಹೆಚ್ಚುವರಿ ಕೊಠಡಿ ನಿರ್ಮಾಣ ಕಾಮಗಾರಿಗೆ ಶಾಸಕ ಎನ್.ನಾಗರಾಜು ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು.ಈ ಸಂದರ್ಭದಲ್ಲಿ ಅವರು ಮಾತನಾಡಿ ಯೋಜನೆ ಅಡಿ ತಾಲ್ಲೂಕಿಗೆ 8.20 ಕೋಟಿ ರೂಪಾಯಿ ಮಂಜೂರಾಗಿದ್ದು ತಾಲ್ಲೂಕಿನಲ್ಲಿರುವ ಪ್ರೌಢಶಾಲೆಗಳಿಗೆ 66 ಹೆಚ್ಚುವರಿ ಕೊಠಡಿ ನಿರ್ಮಾಣ ಮಾಡಲಾಗುವುದು ಎಂದರು.

ಶಾಲಾ, ಕಾಲೇಜುಗಳಲ್ಲಿ ಸೌಲಭ್ಯಗಳ ಕೊರತೆ ಇದ್ದು ಅದನ್ನು ನಿವಾರಿಸಲು ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಶಿಕ್ಷಣ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry