ಗುರುವಾರ , ಮೇ 19, 2022
21 °C

ಪ. ಬಂಗಾಳ: 100 ಕ್ಷೇತ್ರಗಳಿಗೆ ಕಾಂಗ್ರೆಸ್ ಬಿಗಿ ಪಟ್ಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ, (ಐಎಎನ್‌ಎಸ್): ಸೀಟು ಹಂಚಿಕೆ ವಿಷಯಕ್ಕೆ ಸಂಬಂಧಿಸಿ ತಮಿಳುನಾಡಿನಲ್ಲಿ ಡಿಎಂಕೆ ಜೊತೆ ನಡೆಸಿದ ಮಾತುಕತೆಯಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್, ಪಶ್ಚಿಮ ಬಂಗಾಳದಲ್ಲಿಯೂ ಈ ಕುರಿತು ವಾರದೊಳಗಾಗಿ ತೃಣಮೂಲ ಕಾಂಗ್ರೆಸ್ ಜೊತೆ ಅಧಿಕೃತವಾಗಿ ಮಾತುಕತೆ ನಡೆಸಲು ಉತ್ಸುಕವಾಗಿದೆ. ಪಶ್ಚಿಮ ಬಂಗಾಳದ 294 ಸೀಟುಗಳಲ್ಲಿ 100 ಸೀಟುಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಆಸಕ್ತಿ ಹೊಂದಿದ್ದು, ಈ ಕುರಿತು ರಾಜ್ಯದ ಕಾಂಗ್ರೆಸ್ ಮುಖಂಡರು ವರಿಷ್ಠರಿಗೆ ಸಲಹೆ ಮಾಡಿದ್ದಾರೆ. ಇದೇ ವೇಳೆ ಪಕ್ಷ ಸ್ಪರ್ಧಿಸಬೇಕಾದ ಕ್ಷೇತ್ರಗಳನ್ನು ಗುರುತಿಸುವ ಸಲುವಾಗಿ ಕಾಂಗ್ರೆಸ್ ಮುಖಂಡ ಹಾಗೂ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಅವರು ಮಂಗಳವಾರ ಜಿಲ್ಲಾ ಮುಖಂಡರ ಜತೆ ಚರ್ಚೆ ನಡೆಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.