ಫಲಿತಾಂಶ ಸುಧಾರಣೆ ಕಾರ್ಯಾಗಾರ11

7

ಫಲಿತಾಂಶ ಸುಧಾರಣೆ ಕಾರ್ಯಾಗಾರ11

Published:
Updated:

ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಉತ್ತಮ ಪಡಿಸುವ ಸಲುವಾಗಿ ತಾಲ್ಲೂಕಿನ ಇರಕಲ್ಲಗಡ ಗ್ರಾಮದ ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ವಿದ್ಯಾರ್ಥಿಗಳಿಗಾಗಿ ಕಾರ್ಯಾಗಾರ ಆಯೋಜಿಸಲಾಗಿತ್ತು.ಕಾರ್ಯಾಗಾರ ಉದ್ಘಾಟನೆ ನೆರವೇರಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಪೂಜಾರ, ಸತತ ಅಧ್ಯಯನ, ಓದಿದ್ದನ್ನು ಬರೆಯುವುದು ಹಾಗೂ ಗುಂಪು ಚರ್ಚೆಗಳ ಮೂಲಕ ಪುನರಾವರ್ತನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.ಭವಿಷ್ಯದ ಬದುಕು ಉತ್ತಮಗೊಳ್ಳಬೇಕು ಎಂದು ಈಗಿನ ವಿದ್ಯಾರ್ಥಿ ಜೀವನವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದೂ ಅವರು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry