ಫುಟ್‌ಬಾಲ್: ಕೆಎಸ್‌ಪಿ ತಂಡಕ್ಕೆ ಜಯ

ಮಂಗಳವಾರ, ಜೂಲೈ 16, 2019
25 °C

ಫುಟ್‌ಬಾಲ್: ಕೆಎಸ್‌ಪಿ ತಂಡಕ್ಕೆ ಜಯ

Published:
Updated:

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್‌ಪಿ) ತಂಡ ಇಲ್ಲಿ ನಡೆಯುತ್ತಿರುವ ಬೆಂಗಳೂರು ಜಿಲ್ಲಾ ಫುಟ್‌ಬಾಲ್ ಸಂಸ್ಥೆ ಆಶ್ರಯದ  ರಾಜ್ಯ ಸೂಪರ್ ಡಿವಿಷನ್ ಫುಟ್‌ಬಾಲ್ ಲೀಗ್ ಚಾಂಪಿಯನ್‌ಷಿಪ್‌ನ ಮಂಗಳವಾರದ ಪಂದ್ಯದಲ್ಲಿ 1-0 ಗೋಲುಗಳಿಂದ ಎಎಸ್‌ಸಿ ಎದುರು ವಿಜಯ ಸಾಧಿಸಿತು.ಅಶೋಕನಗರದಲ್ಲಿರುವ ರಾಜ್ಯ ಫುಟ್‌ಬಾಲ್ ಸಂಸ್ಥೆ  ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 2ನೇ ನಿಮಿಷದಲ್ಲಿ ಗೋಲು ಗಳಿಸಿದ ಕಾರ್ತಿಕ್ ಕೆಎಸ್‌ಪಿ ತಂಡದ ಗೆಲುವಿನ ರೂವಾರಿ ಎನಿಸಿದರು.ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್‌ಎಐ) ಹಾಗೂ ಧರ್ಮರಾಜ್ ಯೂನಿಯನ್ ತಂಡಗಳ ನಡುವಿನ `ಎ~ ಡಿವಿಷನ್ ಲೀಗ್ ಚಾಂಪಿಯನ್‌ಷಿಪ್‌ನ ಪಂದ್ಯವು 1-1ಗೋಲುಗಳಿಂದ ಡ್ರಾದಲ್ಲಿ ಅಂತ್ಯ ಕಂಡಿತು.ಕ್ರೀಡಾ ಪ್ರಾಧಿಕಾರ ತಂಡದ ಸುದರ್ಶನ್ 59ನೇ ನಿಮಿಷದಲ್ಲಿ ಗೋಲು ತಂದಿತ್ತರು.ಧರ್ಮರಾಜ್ ತಂಡದ ಶ್ಯಾಮ್ 75ನೇ ನಿಮಿಷದಲ್ಲಿ ಚೆಂಡನ್ನು ಗುರಿ ಸೇರಿಸಿ ಸೋಲಿನ ಅಪಾಯದಿಂದ ತಂಡವನ್ನು ಪಾರು ಮಾಡಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry