ಫೆರಿಫೆರಲ್‌ ರಸ್ತೆ ಕಾಮಗಾರಿ ಶೀಘ್ರದಲ್ಲೇ ಆರಂಭ

7

ಫೆರಿಫೆರಲ್‌ ರಸ್ತೆ ಕಾಮಗಾರಿ ಶೀಘ್ರದಲ್ಲೇ ಆರಂಭ

Published:
Updated:

ಬೆಂಗಳೂರು: ನಗರದಲ್ಲಿ ₨ 5,800 ಕೋಟಿ ವೆಚ್ಚದ ಫೆರಿಫೆರಲ್‌ ವರ್ತುಲ ರಸ್ತೆ ನಿರ್ಮಾಣಕ್ಕೆ ಕೇಂದ್ರ ನಗರಾಭಿವೃದ್ಧಿ ಸಚಿವಾಲಯವು ಹಸಿರು ನಿಶಾನೆ ತೋರಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ತಿಂಗಳೊಳಗೆ ಕಾಮಗಾರಿ ಆರಂಭಿಸುವ ನಿರೀಕ್ಷೆ ಇದೆ.‘65ಕಿ.ಮೀ ಉದ್ದದ ಉದ್ದೇಶಿತ ಪೆರಿಫೆರಲ್ ವರ್ತುಲ ರಸ್ತೆ ನಿರ್ಮಾಣಕ್ಕೆ 5,800 ಕೋಟಿ ವೆಚ್ಚವಾಗಲಿದೆ. ಹಣಕಾಸು ನೆರವು ಕೋರಿ ಜಪಾನ್ ಅಂತರರಾಷ್ಟ್ರೀಯ ಸಹಕಾರ ಏಜೆನ್ಸಿಗೆ (ಜೈಕಾ) ವಿಸ್ತೃತ ಯೋಜನಾ ವರದಿ ಸಲ್ಲಿಸಲಾಗಿದೆ. ಜೈಕಾದಿಂದ ಹಣಕಾಸು ನೆರವು ಪಡೆಯುವ ಬಗ್ಗೆ ಕೇಂದ್ರ ಹಣಕಾಸು ಸಚಿವಾಲಯವು ಒಪ್ಪಿಗೆ ನೀಡಬೇಕಿದೆ. ಶೀಘ್ರವೇ ಒಪ್ಪಿಗೆ ದೊರೆಯುವ ನಿರೀಕ್ಷೆ ಇದ್ದು, ಟೆಂಡರ್‌ ಕರೆದು ಫೆಬ್ರುವರಿ ಅಂತ್ಯದಲ್ಲಿ ಕಾಮಗಾರಿ ಆರಂಭಿಸಲಾಗುವುದು’ ಎಂದು ಬಿಡಿಎ ಆಯುಕ್ತ ಟಿ. ಶ್ಯಾಮ್‌ ಭಟ್ ತಿಳಿಸಿದ್ದಾರೆ.ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಆರಂಭವಾಗಿದೆ. ಕಾಮಗಾರಿ ಆರಂಭಕ್ಕೂ ಮುನ್ನ ಜೈಕಾದ ತಂಡವೊಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಒಮ್ಮೆ ಕಾಮಗಾರಿ ಆರಂಭವಾದರೆ 36 ರಿಂದ 40 ತಿಂಗಳಲ್ಲಿ ಪೂರ್ಣಗೊಳಿಸ ಲಾಗುವುದು’ ಎಂದು ಅವರು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry