ಬುಧವಾರ, ಅಕ್ಟೋಬರ್ 23, 2019
25 °C

ಫೆ. 4ರಿಂದ ಕೃಷಿ ಮೇಳ

Published:
Updated:

ಚಿಕ್ಕೋಡಿ: ಕೃಷಿಕರ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಕೃಷಿ, ಆರೋಗ್ಯ ಮತ್ತು  ಶಿಕ್ಷಣ ಕ್ಷೇತ್ರಗಳ ಕುರಿತು ಅಗತ್ಯ ಮಾಹಿತಿ ಗಳನ್ನು ಒದಗಿಸುವ ನಿಟ್ಟಿನಲ್ಲಿ ಇಲ್ಲಿನ ದೂಧಗಂಗಾ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಯು  ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸಹಕಾರದೊಂದಿಗೆ ಈ ಭಾಗದಲ್ಲಿ ಪ್ರಪ್ರಥಮವಾಗಿ ಉತ್ತರ ಕರ್ನಾಟಕ ಮತ್ತು ದಕ್ಷಿಣ ಮಹಾರಾಷ್ಟ್ರ ಮಟ್ಟದ ಭವ್ಯ ಕೃಷಿ ಮೇಳವನ್ನು ಫೆ. 4 ಮತ್ತು 5 ರಂದು ಹಮ್ಮಿಕೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯರೂ ಆಗಿರುವ ಕಾರ್ಖಾನೆ ಅಧ್ಯಕ್ಷ ಮಹಾಂತೇಶ ಕವಟಗಿಮಠ  ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಚಿಕ್ಕೋಡಿ-ಅಂಕಲಿ ರಸ್ತೆಗೆ ಹೊಂದಿಕೊಂಡು 50 ಎಕರೆಗೂ ಹೆಚ್ಚಿನ ವಿಸ್ತಾರದಲ್ಲಿ ಕೃಷಿ ಮೇಳ ನಡೆಯಲಿದ್ದು, ದೇಶದ  ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ವಿವಿಧ ಕಂಪೆನಿಗಳು ಪಾಲ್ಗೊಳ್ಳಲಿವೆ. 400 ರಿಂದ 500 ಮಳಿಗೆಗಳು ಸೇರುವ ನಿರೀಕ್ಷೆ ಇದೆ ಎಂದರು.ನೈಸರ್ಗಿಕ ಏರುಪೇರು, ಹಳೆ ಕೃಷಿ ಪದ್ಧತಿ ಅಳವಡಿಕೆ, ಅಸಮರ್ಪಕ ನೀರಿನ ನಿರ್ವಹಣೆ ಮುಂತಾದ ಹಲವು ಕಾರಣ ಗಳಿಂದಾಗಿ ರೈತ ಕೃಷಿಯಲ್ಲಿ ನಷ್ಟ ಅನುಭವಿಸುತ್ತಿದ್ದಾನೆ. ಈ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಅಗತ್ಯ ವಾದ ಮಾರ್ಗದರ್ಶನ ನೀಡುವ ಉದ್ದೇಶದಿಂದ ಕೃಷಿ ಮೇಳ ಆಯೋಜಿಸ ಲಾಗಿದೆ ಎಂದರು.ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರ ಹಾಗೂ ಜೆಎನ್‌ಎಂಸಿಗಳ ಸಹಯೋಗದಲ್ಲಿ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದ್ದ, ಉಚಿತ ವಾಗಿ ಪ್ರಾಥಮಿಕ ಆರೋಗ್ಯ ತಪಾಸಣೆ  ಮಾಡಲಾಗುತ್ತದೆ ಎಂದು ಹೇಳಿದರು.ಹೆಚ್ಚಿನ ಮಾಹಿತಿಗಾಗಿ ಕಾರ್ಖಾನೆಯ ಕಾರ್ಮಿಕ ಕಲ್ಯಾಣ ಅಧಿಕಾರಿ ಎಸ್.ಎಲ್.ಹಕಾರೆ ಅಥವಾ ಪರಿಸರ ಅಭಿಯಂತರ ಪಟ್ಟಣಶೆಟ್ಟಿ ಅವರನ್ನು ಸಂಪರ್ಕಿಸಬ ಹುದಾಗಿದೆ. ರಾಜ್ಯಸಭೆ ಸದಸ್ಯ ಡಾ.ಪ್ರಭಾಕರ ಕೋರೆ ಅವರ ಮಾರ್ಗದರ್ಶನದಲ್ಲಿ ಕಾರ್ಖಾನೆಯ ಆಡಳಿತ ಮಂಡಳಿಯು ಕೇವಲ ಕಬ್ಬು ನುರಿಸಿ ಸಕ್ಕರೆ ಉತ್ಪಾದನೆ ಕಾರ್ಯಕ್ಕೆ ಮಾತ್ರ ಸೀಮಿತಗೊಳ್ಳದೇ ರೈತ ಸಂಪರ್ಕ ಸಭೆ, ಆರೋಗ್ಯ ಶಿಬಿರ, ರೈತ ಸದಸ್ಯರಿಗೆ ಆರೋಗ್ಯ ವಿಮೆ ಮುಂತಾದ ರೈತಪರ ಯೋಜನೆಗಳನ್ನು ಜಾರಿಗೊಳಿಸುತ್ತಾ ಬಂದಿದೆ ಎಂದರು.ಕೇಂದ್ರದ ಕೃಷಿ ಸಚಿವ ಶರದ ಪವಾರ, ಮುಖ್ಯಮಂತ್ರಿ ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ, ರಾಜ್ಯ ಕೃಷಿ ಸಚಿವ ಉಮೇಶ ಕತ್ತಿ ಮುಂತಾದವರನ್ನು ಆಹ್ವಾನಿಸ ಲಾಗುವದು ಎಂದು ಮಹಾಂತೇಶ ಕವಟಗಿಮಠ ಹೇಳಿದರು.ಅಜೀತ ದೇಸಾಯಿ, ಕೆ.ಕೆ. ಮೈಶಾಳೆ, ಅಮೀತ ಕೋರೆ, ಪ್ರಕಾಶ ಪಾಟೀಲ, ಭರತೇಶ ಬನವಣೆ, ಟಿ.ಡಿ.ಕಾಟೆ, ಮಲ್ಲಿಕಾರ್ಜುನ ಹಿರೇಮಠ, ದತ್ತು ಸಪ್ತಸಾಗರೆ, ಎಸ್.ಬಿ.ಉಮರಾಣಿ ಮುಂತಾದವರು ಉಪಸ್ಥಿತರಿದ್ದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)