ಫೆ.10ರಂದು ಜೆಡಿಎಸ್ ಸಮಾವೇಶ

7

ಫೆ.10ರಂದು ಜೆಡಿಎಸ್ ಸಮಾವೇಶ

Published:
Updated:

ಗುಂಡ್ಲುಪೇಟೆ: ಜಿಲ್ಲೆಯ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ 10ರಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪೂಜೆ ಸಲ್ಲಿಸಿ ರಾಜ್ಯ ಪ್ರವಾಸ ಕೈಗೊಳ್ಳುವರು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೂಡ್ನಾಕೂಡು ಕುಮಾರ್ ಭಾನುವಾರ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ನಂತರ ಹನೂರಿನಲ್ಲಿ ಬಹಿರಂಗ ಸಭೆ ಹಮ್ಮಿಕೊಂಡಿದ್ದು ತಾಲ್ಲೂಕಿನಿಂದ ಕಾರ್ಯಕರ್ತರು ಭಾಗವಹಿಸಬೇಕೆಂದು ಮನವಿ ಮಾಡಿದರು.ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಎಂ. ಮಹಾದೇವು ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಕೊಡುಗೆ ಅಪಾರ ಎಂದರು.ತಾಲ್ಲೂಕು ಘಟಕದ ಅಧ್ಯಕ್ಷ ಎಚ್. ಎಂ. ಮಹೇಶ್ ಮಾತನಾಡಿ, ಹನೂರಿನಲ್ಲಿ ನಡೆಯುವ ಸಮಾವೇಶಕ್ಕೆ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಜಿಲ್ಲೆಯಲ್ಲಿ ಜೆಡಿಎಸ್ ತನ್ನದೇ ಆದ ಸ್ಥಾನ ಹೊಂದಿದೆ ಎಂದರು. ಕಾರ್ಯಕರ್ತರು ಕುಮಾರಸ್ವಾಮಿ ಯವರು ಜಿಲ್ಲೆಗೆ ನೀಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮನವರಿಕೆ ಮಾಡಿ ಕೊಡ ಬೇಕೆಂದು ಮನವಿ ಮಾಡಿದರು.ಟೌನ್ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಹರೀಶ್ ಗೌಡ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ಜಯರಾಂಗೆ ಆದೇಶ ಪತ್ರ ನೀಡಿದರು.ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಟಿಪ್ಪುಸುಲ್ತಾನ್, ಪ್ರಧಾನ ಕಾರ್ಯ ದರ್ಶಿ ಮಹಾದೇವನಾಯಕ್, ತೆರಕಣಾಂಬಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ದುಂಡಮ್ಮ, ಎಸ್.ಸಿ. ಘಟಕದ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಸುಬ್ಬಣ್ಣ, ಮಹಾಂತೇಶ್‌ಕಿಲಗೆರೆ, ನಾಗರಾಜು, ದೊಡ್ಡ ಮಾದಶೆಟ್ಟಿ, ದಸ್ತಗಿರ್ ಭಾಗವಹಿಸಿದ್ದರು,

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry