ಗುರುವಾರ , ಏಪ್ರಿಲ್ 22, 2021
25 °C

ಫೈನಲ್‌ಗೆ ಬೀಗಲ್ಸ್, ಬಿಎಸ್‌ಎನ್‌ಎಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೀಗಲ್ಸ್ ಮತ್ತು ಬಿಎಸ್‌ಎನ್‌ಎಲ್ ತಂಡಗಳು ಇಲ್ಲಿ ನಡೆಯುತ್ತಿರುವ ರಾಜ್ಯ `ಬಿ~ ಡಿವಿಷನ್ ಲೀಗ್ ಬ್ಯಾಸ್ಕೆಟ್‌ಬಾಲ್ ಟೂರ್ನಿಯ ಫೈನಲ್‌ನಲ್ಲಿ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ.ಕಂಠೀರವ ಕ್ರೀಡಾಂಗಣದ ಬ್ಯಾಸ್ಕೆಟ್‌ಬಾಲ್ ಕೋರ್ಟ್‌ನಲ್ಲಿ ಶುಕ್ರವಾರ ನಡೆದ ಸೆಮಿಫೈನಲ್‌ನಲ್ಲಿ ಬೀಗಲ್ಸ್ 79-61 ರಲ್ಲಿ ಸ್ಪೋರ್ಟ್ಸ್ ಹಾಸ್ಟೆಲ್, ಬೆಂಗಳೂರು ತಂಡವನ್ನು ಮಣಿಸಿತು. ವಿರಾಮದ ವೇಳೆಗೆ 38-36 ರಲ್ಲಿ ಮುನ್ನಡೆ ಸಾಧಿಸಿದ್ದ ವಿಜಯಿ ತಂಡದ ಪರ ಚೇತನ್ (26) ಉತ್ತಮ ಪ್ರದರ್ಶನ ನೀಡಿದರು.ಇನ್ನೊಂದು ನಾಲ್ಕರಘಟ್ಟದ ಪಂದ್ಯದಲ್ಲಿ ಬಿಎಸ್‌ಎನ್‌ಎಲ್ 51-45 ರಲ್ಲಿ ಜೆಎಸ್‌ಸಿ ತಂಡವನ್ನು ಮಣಿಸಿತು. ವಿರಾಮದ ವೇಳೆಗೆ ವಿಜಯಿ ತಂಡ 16-12 ರಲ್ಲಿ ಮೇಲುಗೈ ಸಾಧಿಸಿತ್ತು. ಫೈನಲ್ ಪಂದ್ಯ ಶನಿವಾರ ಸಂಜೆ 4.30ಕ್ಕೆ ನಡೆಯಲಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.