ಸಾಗರ: ಮುದ್ರಣ ಹಾಗೂ ಛಾಯಾಚಿತ್ರ ಕ್ಷೇತ್ರದಲ್ಲಿ ಇರುವವರು ಮುದ್ರಣ ಕ್ಷೇತ್ರದಲ್ಲಿ ಆಗುತ್ತಿರುವ ತಂತ್ರಜ್ಞಾನದ ಹೊಸ ಅವಿಷ್ಕಾರಗಳ ಕುರಿತು ಅರಿವು ಹೊಂದುವುದು ಅತ್ಯವಶ್ಯಕ ಎಂದು ನಗರಸಭೆ ಅಧ್ಯಕ್ಷ ರಾಧಾಕೃಷ್ಣ ಬೇಂಗ್ರೆ ಹೇಳಿದರು.

ಮಲೆನಾಡು ಮುದ್ರಕರ ಸಂಘ ಭಾನುವಾರ ಏರ್ಪಡಿಸಿದ್ದ ಫೋಟೋಶಾಪ್ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಹಕರ ಅಗತ್ಯಗಳನ್ನು ಪೂರೈಸಲು ಗುಣಮಟ್ಟ ಕಾಪಾಡಿಕೊಳ್ಳಬೇಕಾದರೆ ಬದಲಾದ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದು ಮುಖ್ಯ ಎಂದರು.

ಇದೇ ಸಂದರ್ಭದಲ್ಲಿ ಚಿತ್ರ ಕಲಾವಿದ ಪೀಟರ್ ಡಿಸೋಜ ಅವರನ್ನು ಜೋಷಿ ಫೌಂಡೇಷನ್ನ ಅಧ್ಯಕ್ಷ ದಿನೇಶ್ ಜೋಷಿ ಸನ್ಮಾನಿಸಿದರು.

ಮಲೆನಾಡು ಮುದ್ರಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಂತರರಾಷ್ಟ್ರೀಯ ಖ್ಯಾತಿಯ ಛಾಯಾಗ್ರಾಹಕ ಎ.ಜಿ. ಲಕ್ಷ್ಮಿನಾರಾಯಣ, ಸಂಜಯ್ ಮೆಮೋರಿಯಲ್ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯ ಸಿ.ಎ. ರಾಜಶೇಖರ್, ತಾಲ್ಲೂಕು ಫೋಟೋಗ್ರಾಫರ್ ಸಂಘದ ಅಧ್ಯಕ್ಷ ಅನಿಲ್ಕುಮಾರ್ ಹಾಜರಿದ್ದರು.

ನಾಗರಾಜ್ ಸ್ವಾಗತಿಸಿದರು. ಮೃತ್ಯುಂಜಯ ವಂದಿಸಿದರು.ಎಸ್.ವಿ. ಹಿತಕರಜೈನ್ ಕಾರ್ಯಕ್ರಮ ನಿರೂಪಿಸಿದರು.

ಸಮೀಕ್ಷೆ
ಸಾಗರ: ಇಲ್ಲಿನ ಮಾರಿಕಾಂಬಾ ದೇವಸ್ಥಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸುತ್ತಮುತ್ತಲು ಇರುವ ಅಂಗಡಿಗಳ ಮಾಲೀಕರು ಮಾಡಿರುವ ರಸ್ತೆ ಒತ್ತುವರಿಯನ್ನು ತೆರವುಗೊಳಿಸುವ ಸಂಬಂಧ ತಾಲ್ಲೂಕು ಆಡಳಿತದಿಂದ ಭಾನುವಾರ ಬೆಳಿಗ್ಗೆ ಸಮೀಕ್ಷಾ ಕಾರ್ಯ ನಡೆಯಿತು.

ಸುದ್ದಿಗಾರರೊಂದಿಗೆ ಮಾತನಾಡಿದ ಉಪ ವಿಭಾಗಾಧಿಕಾರಿ ಡಾ.ಜಿ.ಎಲ್. ಪ್ರವೀಣ್ಕುಮಾರ್, ಸುಪ್ರೀಂ ಕೋರ್ಟ್ನ ಆದೇಶದಂತೆ ರಸ್ತೆ ಮಧ್ಯೆ ಇರುವ ದೇವಸ್ಥಾನಗಳನ್ನು ತೆರವುಗೊಳಿಸಬೇಕು. ಆದರೆ, ಇಲ್ಲಿನ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದನ್ನು ತಡೆಗಟ್ಟಲು ಮಾರಿಕಾಂಬಾ ದೇವಸ್ಥಾನದ ಸುತ್ತ ಇರುವ ಅಂಗಡಿಗಳ ಒತ್ತುವರಿ ತೆರವುಗೊಳಿಸಿ ರಸ್ತೆ ವಿಸ್ತರಣೆ ಮಾಡಲಾಗುವುದು ಎಂದರು.

ರಸ್ತೆಗಾಗಿ ಈ ಭಾಗದ ಅಂಗಡಿಗಳ ಮಾಲೀಕರು ಕೆಲವು ಪ್ರದೇಶವನ್ನು ಬಿಟ್ಟು ಕೊಡಬೇಕಾಗುತ್ತದೆ. ಇದರಿಂದ ಅವರಿಗೆ ಆಗುವ ನಷ್ಟವನ್ನು ಮಾರಿಕಾಂಬಾ ದೇವಸ್ಥಾನದ ಸಮಿತಿ ತುಂಬಿ ಕೊಡುತ್ತದೆ ಎಂದು ಹೇಳಿದರು.

ನಗರಸಭೆ ಅಧ್ಯಕ್ಷ ರಾಧಾಕೃಷ್ಣ ಬೇಂಗ್ರೆ ಮಾತನಾಡಿ, ಈಗಾಗಲೇ ದೇವಸ್ಥಾನದ ಸಮಿತಿ ಹಾಗೂ ಈ ಭಾಗದ ಅಂಗಡಿಗಳ ಮಾಲೀಕರೊಂದಿಗೆ ಸಮಾಲೋಚನಾ ಸಭೆ ನಡೆಸಲಾಗಿದ್ದು ಅಂಗಡಿಗಳ ಮಾಲೀಕರ ಸಹಕಾರದಿಂದ ದೇವಸ್ಥಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತಿದೆ ಎಂದು ತಿಳಿಸಿದರು.

ಡಿವೈಎಸ್ಪಿ ಡಾ.ಶರಣಪ್ಪ, ತಹಶೀಲ್ದಾರ್ ಯೋಗೇಶ್ವರ್, ನಗರಸಭೆ ಉಪಾಧ್ಯಕ್ಷ ಡಿ. ರವಿ, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ್ಸುಬ್ರು, ಸದಸ್ಯರಾದ ಟಿ.ಡಿ. ಮೇಘರಾಜ್, ಸಂತೋಷ್ಶೇಟ್, ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಓಮನ್ಸಿಂಗ್ ಇನ್ನಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.