ಭಾನುವಾರ, ಜೂನ್ 13, 2021
23 °C

ಫ್ಲೋರೈಡ್ ನೀರಿನಿಂದ ಮುಕ್ತಿ ಇಲ್ಲವೇ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಾವಗಡ ತಾಲ್ಲೂಕಿನಲ್ಲಿ ಈಗ ಬರ ಪರಿಸ್ಥಿತಿ ಇದೆ. ಕನಿಷ್ಠ ಮಳೆ ಬೀಳುವ ಈ ತಾಲ್ಲೂಕಿನಲ್ಲಿ ಬೇಸಿಗೆ ಆರಂಭವಾಗುತ್ತಿದ್ದಂತೆ ಜನರಿಗೆ ನರಕಸದೃಶ ಅನುಭವವಾಗುತ್ತದೆ.



ಇಡೀ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಅಭಾವವಿದೆ. ಅಲ್ಪ ಸ್ವಲ್ಪ ನೀರು ಸಿಕ್ಕರೂ ಅದು ಫ್ಲೋರೈಡ್ ಮಿಶ್ರಿತವಾಗಿದೆ. ಈ ನೀರು ಕುಡಿದವರು ಅಕಾಲ ವೃದ್ಧಾಪ್ಯಕ್ಕೆ ತುತ್ತಾಗುವ ಹಾಗೂ ಕಿಡ್ನಿಯಲ್ಲಿ ಕಲ್ಲುಗಳಾಗುವ ಅಪಾಯವಿದೆ. ವಿಧಿಯಿಲ್ಲದೆ ಜನರು ಅದೇ ನೀರು ಕುಡಿಯುತ್ತಾರೆ.

 

ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಪಾವಗಡಕ್ಕೆ  0.5 ಟಿಎಂಸಿ ನೀರನ್ನು ಹೊರಗಿನಿಂದ ಪೂರೈಸುವ ಯೋಜನೆಗೆ ಜಾರಿಗೆ ತರುವ ಭರವಸೆ ನೀಡಿದ್ದರು. ಅದಿನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಇನ್ನಾದರೂ ಈ ಭಾಗದ ಜನ ಪ್ರತಿನಿಧಿಗಳು ತಾಲ್ಲೂಕಿನ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಲಿ.



 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.