ಭಾನುವಾರ, ಏಪ್ರಿಲ್ 18, 2021
33 °C

ಬಂಗಾರಪೇಟೆಯಲ್ಲಿ ಅತ್ಯಧಿಕ ಶೇ 79ರಷ್ಟು ಮತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೂರು ಕ್ಷೇತ್ರಗಳ ಉಪ ಚುನಾವಣೆಯ ಮತದಾನದ ಅಂತಿಮ ವಿವರಗಳು ಲಭ್ಯವಾಗಿದ್ದು, ಜಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಶೇಕಡ 76.01ರಷ್ಟು ಮತದಾನ ನಡೆದಿದೆ. ಚನ್ನಪಟ್ಟಣದಲ್ಲಿ ಶೇ 78.05 ಮತ್ತು ಬಂಗಾರಪೇಟೆ ಕ್ಷೇತ್ರದಲ್ಲಿ ಶೇ 78.97 ಮತದಾನ ನಡೆದಿದೆ. ಉಪ ಚುನಾವಣೆ ನಡೆದ ಮೂರು ವಿಧಾನಸಭಾ ಕ್ಷೇತ್ರಗಳಲ್ಲೂ ಹಿಂದಿನ ಚುನಾವಣೆಗಿಂತ ಹೆಚ್ಚಿನ ಸಂಖ್ಯೆಯ ಮತದಾರರು ಹಕ್ಕು ಚಲಾಯಿಸಿದ್ದಾರೆ. ಮತದಾನದ ಪೂರ್ಣ ವಿವರಗಳನ್ನು ಪರಿಶೀಲನೆ ನಡೆಸಿರುವ ಚುನಾವಣಾ ಆಯೋಗ, ನಿಖರ ಮತದಾನದ ಪ್ರಮಾಣವನ್ನು ಪ್ರಕಟಿಸಿದೆ.‘ಹಿಂದಿನ ಚುನಾವಣೆಗಳಿಗೆ ಹೋಲಿಸಿದರೆ ಮೂರು ಕ್ಷೇತ್ರಗಳಲ್ಲೂ ಉತ್ತಮ ಮತದಾನವಾಗಿದೆ. ಮತದಾನದ ಪ್ರಮಾಣದಲ್ಲಿ ಹೆಚ್ಚಳವಾಗಿರುವುದು ಸಂತಸದ ವಿಷಯ. ಎಲ್ಲ ಕ್ಷೇತ್ರಗಳ ಮತಯಂತ್ರಗಳನ್ನು ಬಿಗಿ ಭದ್ರತೆಯಲ್ಲಿ ಇರಿಸಿದ್ದು, ನಿಗದಿಯಂತೆ ಮೇ 13ರಂದು ಮತ ಎಣಿಕೆ ನಡೆಯಲಿದೆ’ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಿ.ಎಸ್.ಸುರಂಜನ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.ಜಗಳೂರು ಕ್ಷೇತ್ರದಲ್ಲಿ 2008ರ ವಿಧಾನಸಭಾ ಚುನಾವಣೆಯಲ್ಲಿ ಶೇ 72ರಷ್ಟು ಮತ ಚಲಾವಣೆ ಆಗಿದ್ದರೆ, 2009ರ ಲೋಕಸಭಾ ಚುನಾವಣೆಯಲ್ಲಿ ಶೇ 70.84ರಷ್ಟು ಮತದಾರರು ಹಕ್ಕು ಚಲಾಯಿಸಿದ್ದರು. ಈ ಉಪ ಚುನಾವಣೆಯಲ್ಲಿ ಶೇ 76.01ರಷ್ಟು ಮತದಾರರು ಹಕ್ಕು ಚಲಾಯಿಸಿದ್ದು, ಮತದಾನದ ಪ್ರಮಾಣದಲ್ಲಿ ಉತ್ತಮ ಬೆಳವಣಿಗೆ ಕಂಡುಬಂದಿದೆ.ಬಂಗಾರಪೇಟೆಯಲ್ಲಿ 2008ರ ವಿಧಾನಸಭಾ ಚುನಾವಣೆಯಲ್ಲಿ ಶೇ 72.94 ಮತ್ತು 2009ರ ಲೋಕಸಭಾ ಚುನಾವಣೆಯಲ್ಲಿ ಶೇ 70.67ರಷ್ಟು ಮತದಾನ ನಡೆದಿತ್ತು.ಶನಿವಾರ ನಡೆದ ಮತದಾನದಲ್ಲಿ ಶೇ 78.05ರಷ್ಟು ಮತದಾರರು ಮತ ಚಲಾಯಿಸಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಹಿಂದಿನ ಎರಡು ಸಾರ್ವತ್ರಿಕ ಚುನಾವಣೆಗಳಲ್ಲಿ ಶೇ 78.11 ಮತ್ತು ಶೇ 71.95ರಷ್ಟು ಮತದಾನವಾಗಿತ್ತು. ಈ ಉಪ ಚುನಾವಣೆಯಲ್ಲಿ ಶೇ 78.97ರಷ್ಟು ಮತದಾನ ನಡೆದಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.