ಬುಧವಾರ, ಏಪ್ರಿಲ್ 21, 2021
25 °C

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭುವನೇಶ್ವರ (ಪಿಟಿಐ): ಬಂಗಾಳ ಕೊಲ್ಲಿಯ ಪೂರ್ವ- ಕೇಂದ್ರ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಭಾನುವಾರ ಒಡಿಶಾದ ಪರದೀಪ್‌ನಿಂದ ಆಗ್ನೇಯಕ್ಕೆ 520 ಕಿ.ಮೀ ದೂರದಲ್ಲಿ ಕೇಂದ್ರೀಕೃತವಾಗಿದ್ದು, ಅದು ಚಂಡಮಾರುತವಾಗಿ ಬದಲಾಗುವ ಸಾಧ್ಯತೆ ಇದೆ.ವಾಯುಭಾರ ಕುಸಿತವು ಮತ್ತಷ್ಟು ತೀವ್ರಗೊಂಡು ಚಂಡಮಾರುತವಾಗಿ ಮಾರ್ಪಟ್ಟು ಸೋಮವಾರದ ವೇಳೆಗೆ ನಿಧಾನವಾಗಿ ಪಶ್ಚಿಮಾಭಿಮುಖವಾಗಿ ಚಲಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.ಮುಂದಿನ 72 ಗಂಟೆಗಳ ಅವಧಿಯಲ್ಲಿ ಈ ಮಾರುತವು ದಕ್ಷಿಣ ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಉತ್ತರ ಕರಾವಳಿ ಮೂಲಕ ಹಾದು ಹೋಗುವ ನಿರೀಕ್ಷೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.ಈ ಸಂದರ್ಭದಲ್ಲಿ ಒಡಿಶಾದ ಕರಾವಳಿ ಭಾಗಗಳಲ್ಲಿ ಹಾಗೂ ರಾಜ್ಯದ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಚಂಡಮಾರುತ ಅಪ್ಪಳಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಒಡಿಶಾ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದೂ ಮೂಲಗಳು ಹೇಳಿವೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.