ಶುಕ್ರವಾರ, ಜೂನ್ 18, 2021
28 °C

ಬಂಗಾಳದಲ್ಲೂ ಮಹಿಳಾ ಮೀಸಲು ಬಾಯಲ್ಲಿ ಮಾತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲ್ಕತ್ತ (ಪಿಟಿಐ):  ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀ­ಕಾರದ ಕುರಿತಾಗಿ ಎಲ್ಲಾ ರಾಜಕೀಯ ಪಕ್ಷಗಳು ಮಾತನಾಡುತ್ತವೆಯಾದರೂ,  ಚುನಾವಣೆಗಳಲ್ಲಿ ಮಹಿಳೆಯರಿಗೆ ಟಿಕೆಟ್‌ ನೀಡುವ ವಿಷಯದಲ್ಲಿ ಅವುಗಳದ್ದು ಜಾಣ ಮೌನ.

ಪಶ್ಚಿಮ ಬಂಗಾಳ ರಾಜ್ಯವನ್ನೇ ಪರಿ­ಗ­ಣಿ­ಸುವುದಾದರೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಡು ವೈರಿ ಪಕ್ಷಗಳಾದ ತೃಣಮೂಲ ಕಾಂಗ್ರೆಸ್‌ ಹಾಗೂ ಎಡಪಕ್ಷಗಳು ಮಹಿಳೆಯರಿಗೆ ಟಿಕೆಟ್‌ ನೀಡುವ ವಿಚಾರದಲ್ಲಿ ಇತರ ಪಕ್ಷಗಳಿಗೆ ಮಾದರಿಯಾಗುವಲ್ಲಿ ವಿಫಲ­ವಾಗಿವೆ.ಪಶ್ಚಿಮ ಬಂಗಾಳದ 42 ಲೋಕಸಭಾ ಕ್ಷೇತ್ರಗಳಲ್ಲಿ ಟಿಎಂಸಿಯು 11 ಕಡೆಗಳಲ್ಲಿ ಮಹಿಳೆಯರನ್ನು ಕಣಕ್ಕಿಳಿಸಿದೆ. ಎಡ ಪಕ್ಷಗಳು ಕೇವಲ ಆರು ಮಹಿಳೆಯರಿಗೆ ಟಿಕೆಟ್‌ ನೀಡಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.