ಬುಧವಾರ, ಜುಲೈ 28, 2021
21 °C

ಬಂಜಾರಾ ಜನಾಂಗದ ಅಭಿವೃದ್ಧಿ: ರೂ 100 ಕೋಟಿಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಬಂಜಾರಾ ಜನಾಂಗದ ಅಭಿವೃದ್ಧಿಗೆ ಸರ್ಕಾರ ಕೂಡಲೇ 100 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಬೇಕು’ ಎಂದು ‘ಕರ್ನಾಟಕ ಪ್ರದೇಶ ಲಂಬಾಣಿ ಬಂಜಾರ ಕಲ್ಯಾಣ ಸಂಘ’ದ ರಾಜ್ಯ ಅಧ್ಯಕ್ಷ ಕೃಷ್ಣಾ ನಾಯಕ್ ಮನವಿ ಮಾಡಿದ್ದಾರೆ.ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹೆಸರಿಗೆ ಮಾತ್ರ ಲಂಬಾಣಿ ಅಭಿವೃದ್ಧಿ ನಿಗಮ ಸ್ಥಾಪಿಸಿ 10 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಇದಕ್ಕೂ ಮೊದಲು ಬಂಜಾರರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ವ್ಯಾಪ್ತಿಯಲ್ಲಿದ್ದಾಗ ಹಲವಾರು ಸೌಲಭ್ಯಗಳು ದೊರೆಯುತ್ತಿದ್ದವು.ಇದೀಗ ಪ್ರತ್ಯೇಕ ನಿಗಮ ಮಾಡಿರುವುದರಿಂದ ಅವಶ್ಯ ಸೌಲಭ್ಯಗಳು ಸಿಗುತ್ತಿಲ್ಲ’ ಎಂದು ದೂರಿದರು.

ಬಂಜಾರ ಭವನ ಸ್ಥಾಪಿಸುತ್ತೇವೆ ಎಂದು ಹಲವಾರು ರಾಜಕಾರಣಿಗಳು ಹಣ ಎತ್ತಿದ್ದೇ ಬಂತು. ಭವನ ಮಾತ್ರ ನಿರ್ಮಾಣವಾಗಿಲ್ಲ ಎಂದು ದೂರಿದರು..

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.