ಬೆಂಗಳೂರು: `ಬಂಜೆತನ (ಇನ್ಫರ್ಟಿಲಿಟಿ) ಸಮಸ್ಯೆ ನಿವಾರಣೆಗೆ ಹೆಚ್ಚಿನ ಅಧ್ಯಯನ ಹಾಗೂ ಸಂಶೋಧನೆ ನಡೆಸಲು ರಾಜ್ಯದ ವೈದ್ಯಕೀಯ, ಪ್ಯಾರಾ ಮೆಡಿಕಲ್ ಕಾಲೇಜುಗಳಲ್ಲಿ 1ವರ್ಷದ ಕೋರ್ಸ್ ಪ್ರಾರಂಭಿಸಲು ಚಿಂತಿಸಲಾಗುವುದು~ ಎಂದು ಸಚಿವ ಎಸ್.ಎ.ರಾಮದಾಸ್ ಇಲ್ಲಿ ತಿಳಿಸಿದರು.

ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ಟ್ರೈನಿಂಗ್ ಅಂಡ್ ರೀಸರ್ಚ್ ರಿಪ್ರೊಡಕ್ಷನ್ ಹೆಲ್ತ್ ಸಹಯೋಗದಲ್ಲಿ ನಗರದ ಖಾಸಗಿ ಹೋಟೆಲ್ನಲ್ಲಿ ಶನಿವಾರ ಆಯೋಜಿಸಿದ್ದ `ಲೈಫ್ 2011~ ವೈದ್ಯಕೀಯ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

`ವೈದ್ಯಕೀಯ ಕ್ಷೇತ್ರದಲ್ಲಿ ಬಂಜೆತನ ಸಮಸ್ಯೆ ನಿವಾರಣೆಗೆ ಹೆಚ್ಚಿನ ಸಂಶೋಧನೆಯ ಅಗತ್ಯವಿದೆ. 6 ಅಥವಾ 1ವರ್ಷದ ಅವಧಿಯ ಕೋರ್ಸ್ಗಳನ್ನು ಪ್ರಾರಂಭಿಸಲು ವಿಶ್ವವಿದ್ಯಾಲಯಗಳು, ವೈದ್ಯಕೀಯ ತಜ್ಞರೊಂದಿಗೆ ಚರ್ಚಿಸುತ್ತೇನೆ. ಬಳಿಕ ವಿಷಯವನ್ನು ಮುಖ್ಯಮಂತ್ರಿಗಳಲ್ಲಿ ಪ್ರಸ್ತಾಪಿಸುತ್ತೇನೆ~ ಎಂದರು.

ಅಧಿವೇಶನದಲ್ಲಿ ಪ್ರಸ್ತಾಪ ಸರ್ಕಾರ ಹಲವಾರು ಆರೋಗ್ಯ ಸೇವೆಗಳನ್ನು ವಿಮಾ ವ್ಯಾಪ್ತಿಗೆ ಒಳಪಡಿಸಿದೆ. ಬಂಜೆತನ ನಿವಾರಣೆಗೆ ಚಿಕಿತ್ಸೆ ಪಡೆಯಲು ಹೆಚ್ಚು ಹಣ ವೆಚ್ಚವಾಗಲಿದೆ. ಸಾಮಾನ್ಯ ವರ್ಗದವರು ಚಿಕಿತ್ಸೆ ಪಡೆಯುವುದು ಕಷ್ಟವಾಗಿದೆ. ಬಂಜೆತನ ಚಿಕಿತ್ಸೆಯನ್ನು ವಿಮಾ ವ್ಯಾಪ್ತಿಗೆ ತರಲು ಡಿಸೆಂಬರ್ನಲ್ಲಿ ನಡೆಯಲಿರುವ ಅಧಿವೇಶನದಲ್ಲಿ ವಿಷಯ ಪ್ರಸ್ತಾಪ ಮಾಡುತ್ತೇನೆ ಎಂದು ಹೇಳಿದರು.

ಬಂಜೆತನ ಸಮಸ್ಯೆ ಬಗ್ಗೆ ಗ್ರಾಮಾಂತರ ಪ್ರದೇಶದ ಸ್ತ್ರೀಯರಲ್ಲಿ ಅರಿವು ಮೂಡಿಸುವುದು ಬಹಳ ಅಗತ್ಯವಿದೆ. ಈ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡಲು ಸರ್ಕಾರ ನಿರ್ಣಯ ತೆಗೆದುಕೊಳ್ಳಲಿದೆ. ಹೆಚ್ಚಿನ ಸಂಶೋಧನೆಗೆ ರಾಜ್ಯದ 10 ಕಾಲೇಜುಗಳನ್ನು ಸಂಶೋಧನಾ ಕೇಂದ್ರಗಳನ್ನಾಗಿ ಮಾಡಲಾಗುವುದು. ಸಂಶೋಧನೆಗೆ ಒತ್ತು ನೀಡಲು ಸರ್ಕಾರದಿಂದ 100 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.

ಕಾನೂನು ಕ್ರಮ: ಯುವಿಸಿಇ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದಲ್ಲಿ ಯಾರೇ ಪ್ರಭಾವಿಗಳು ಭಾಗಿಯಾಗಿರಲಿ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದು, ಹೆಚ್ಚಿನ ಬೆಳವಣಿಗೆಗಳ ಬಗ್ಗೆ ಮೂರ್ನಾಲ್ಕು ದಿನಗಳಲ್ಲಿ ಮಾಹಿತಿ ನೀಡುತ್ತೇನೆ. 2009- 10ನೇ ಸಾಲಿನಲ್ಲಿ ನಡೆದಿರುವ ಪರೀಕ್ಷೆಗಳ ಅಕ್ರಮ ಸಿಐಡಿ ತನಿಖೆಗೆ ನೀಡಲು ನಿರ್ಧರಿಸಲಾಗಿದೆ ಎಂದು ಕಾರ್ಯಕ್ರಮದ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ವೈದ್ಯಕೀಯ ಕಾಲೇಜುಗಳಲ್ಲಿ ಇಂತಹ ಅಕ್ರಮ ದಂಧೆಗಳು ಹಲವಾರು ವರ್ಷಗಳಿಂದ ನಡೆಯುತ್ತಿವೆ. ಈ ಅಂಶ ಈಗ ಬೆಳಕಿಗೆ ಬಂದಿದೆ. ಮುಂದಿನ ದಿನಗಳಲ್ಲಿ ಇಂತಹ ಅಕ್ರಮಗಳು ಜರುಗದಂತೆ ಕಟ್ಟುಮೂರು ದಿನಗಳ ಕಾಲ ನಡೆಯುವ ಕಾರ್ಯಾಗಾರದಲ್ಲಿ ದೇಶದ ನೂರಾರು ವೈದ್ಯರು, ವಿಜ್ಞಾನಿಗಳು ಭಾಗವಹಿಸಿದ್ದಾರೆ. ್ರಸೂತಿ ತಜ್ಞೆ ಡಾ.ಕಾಮಿನಿರಾವ್, ಡಾ.ಹೇಮಾ ದಿವಾಕರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.