ಸೋಮವಾರ, ಜೂನ್ 14, 2021
27 °C

ಬಂಡವಾಳಶಾಹಿ ಕಾಯುತ್ತಿರುವ ಜೆಡಿಎಸ್‌: ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಜೆಡಿಎಸ್‌ ಪಕ್ಷವು ಚುನಾವಣೆಗೆ ಸ್ಪರ್ಧಿಸಲು ಬಂಡವಾಳಶಾಹಿಗಳನ್ನು ಕಾಯುತ್ತಿರುವ ಪಕ್ಷವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಅಶ್ವತ್ಥ ನಾರಾಯಣ್‌ ಟೀಕಿಸಿದರು.ಬುಧವಾರ ನಗರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌್ ಹಾಗೂ ಜೆಡಿಎಸ್‌ ಪಕ್ಷಗಳು ಜನವಿರೋಧಿ ನೀತಿಯನ್ನು ಅನುಸರಿಸುತ್ತಿವೆ ಎಂದರು.ತಾಲ್ಲೂಕು, ಹೋಬಳಿ ಮತ್ತು ಪಂಚಾಯಿತಿ ಮಟ್ಟದಲ್ಲಿ ಚುನಾವಣೆ ನಿರ್ವಹಣೆಯನ್ನು ಯಶಸ್ವಿಯಾಗಿ ಮಾಡುವುದು ಮುಖ್ಯ ಎಂದು ಹೇಳಿದರು.ಬಿಜೆಪಿ ನಿಯೋಜಿತ ಅಭ್ಯರ್ಥಿ ಪ್ರೊ.ಬಿ.ಶಿವಲಿಂಗಯ್ಯ ಮಾತನಾಡಿ, ಭಾರತದ ಸರ್ವತೋಮುಖ ಬೆಳವಣಿಗೆಯ ಕನಸನ್ನು ನನಸು ಮಾಡುವ ವ್ಯಕ್ತಿ ನರೇಂದ್ರ ಮೋದಿ ಆಗಿದ್ದಾರೆ. ದೇಶದ ಚಿಂತನೆ ಮತ್ತು ಕನಸನ್ನು ನನಸು ಮಾಡುವ ಚುನಾವಣೆಯು ಇದಾಗಿದ್ದು, ಮತದಾರರು ಜಾಗೃತರಾಗಿ ಸೂಕ್ತ ಅಭ್ಯರ್ಥಿಗೆ ಮತ ನೀಡಬೇಕು ಎಂದರು.ಜಿಲ್ಲೆಯಲ್ಲಿ ಯಾವುದೇ ಕೈಗಾರಿಕೆ ಉತ್ತೇಜಿಸುವ ಹಾಗೂ ರೈತರ ಹೋರಾಟವನ್ನು ಬೆಂಬಲಿಸುವ ಕೆಲಸ ಆಗಿಲ್ಲ.  ನರೇಂದ್ರ ಮೋದಿ ಪ್ರದಾನಿಯಾದರೆ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಿದ್ದಾರೆ ಎಂದರು.ಮುಖಂಡರಾದ ಬಲರಾಂ, ಸುಜಾತ ಸಿದ್ದಯ್ಯ, ಕೆ.ಎಸ್.ಮಲ್ಲಿಕಾರ್ಜುನ್‌ ಮತ್ತಿತರರು ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.