ಶನಿವಾರ, ಜೂನ್ 12, 2021
22 °C

ಬಂಡಾಯ ಬೇಡ: ಕುಮಾರ್‌ಗೆ ಸಿ.ಎಂ ಸಿದ್ದರಾಮಯ್ಯ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕಾಂಗ್ರೆಸ್‌ ಹೈಕಮಾಂಡ್‌ ನಿರ್ಧಾರದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಂಜುನಾಥ ಭಂಡಾರಿ ಅವರಿಗೆ ಟಿಕೆಟ್‌ ನೀಡಲಾಗಿದೆ. ಅಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಬಾರದು ಎಂದು ಕುಮಾರ್ ಬಂಗಾರಪ್ಪ ಅವರಿಗೆ ಮನವಿ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ನಗರದ ಅರಮನೆ ಮೈದಾನದಲ್ಲಿ ಭಾನುವಾರ ಕಾಂಗ್ರೆಸ್‌ ಕಾರ್ಯಕರ್ತ­ರಿಗಾಗಿ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟನೆ ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ಬುಧವಾರ ನಾಮಪತ್ರ ಸಲ್ಲಿಸುತ್ತೇನೆ ಎಂದು ಕುಮಾರ್‌ ಅವರು ಹೇಳಿರುವುದು ಗಮನಕ್ಕೆ ಬಂದಿದೆ. ಪಕ್ಷದ ಅಭ್ಯರ್ಥಿಯ ವಿರುದ್ಧ ಕಣಕ್ಕಿಳಿಯದಂತೆ ಅವರಿಗೆ ಮನವಿ ಮಾಡಿದ್ದೇವೆ’ ಎಂದರು.ಜಾಫರ್‌ ಷರೀಫ್‌ ಅವರು ಪಕ್ಷ ತೊರೆಯಲು ಮುಂದಾಗಿರುವ ಕುರಿತು ಪ್ರಶ್ನಿಸಿದಾಗ, ‘ಷರೀಫ್‌ ಅವರು ಕಾಂಗ್ರೆಸ್‌ನಲ್ಲೇ ಇರುತ್ತಾರೆ. ಅವರು ಯಾವ ಪಕ್ಷಕ್ಕೂ ಹೋಗುವುದಿಲ್ಲ’ ಎಂದು ಉತ್ತರಿಸಿದರು.ಮಂಡ್ಯ ಸಂಸದೆ ರಮ್ಯಾ ಅವರು ಭಾನುವಾರ ಬೆಳಿಗ್ಗೆ ದಿಢೀರನೆ ದೆಹಲಿಗೆ ತೆರಳಿರುವ ಕುರಿತು ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.