ಗುಂಡ್ಲುಪೇಟೆ: ಸಫಾರಿಗೆ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ ಎಂದು ಹುಲಿ ಯೋಜನೆ ನಿರ್ದೇಶಕ ಕುಮಾರ್ಪುಷ್ಕರ್ ತಿಳಿಸಿದ್ದಾರೆ.

ಈ ಬಾರಿ ದಸರಾ ರಜೆ ಪ್ರಾರಂಭ ವಾಗುವ ಮೊದಲೇ ಸಫಾರಿಗೆ ಅವಕಾಶ ಕಲ್ಪಿಸಿದ ಕಾರಣ ಪ್ರತಿ ನಿತ್ಯ 400ಕ್ಕೂ ಹೆಚ್ಚು ಪ್ರವಾಸಿಗರು ನೋಡಲು ಆಗಮಿಸುತ್ತಿದ್ದರು. 2 ಲಕ್ಷಕ್ಕೂ ಅಧಿಕ ಪ್ರವಾಸಿಗರು ಭೇಟಿ ನೀಡಿ ಸಫಾರಿ ನೋಡಿದ್ದಾರೆ ಎಂದು ತಿಳಿಸಿದರು.

ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಸಫಾರಿಯಿಂದ ಅರಣ್ಯ ಇಲಾಖೆಗೆ ಉತ್ತಮ ಆದಾಯ ನಿರೀಕ್ಷಿಸಲಾಗಿದೆ. ಎರಡು ದಿವಸಗಳಿಂದ ಮಳೆಯಾಗುತ್ತಿರುವ ಕಾರಣ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖವಾಗಿದೆ ಎಂದರು.

ಉತ್ತಮ ಮಳೆಯಾಗಿರುವುದರಿಂದ ಬಂಡೀಪುರ ಅಭಯಾರಣ್ಯದಲ್ಲಿ ಹಚ್ಚ ಹಸಿರು ಇದ್ದು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಅರಣ್ಯ ಒಳಭಾಗದಲ್ಲಿರುವ ಕೆರೆಗಳು ತುಂಬಿರುವುದರಿಂದ ವನ್ಯಜೀವಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.