ಶನಿವಾರ, ಫೆಬ್ರವರಿ 27, 2021
19 °C

ಬಂಧನ ಖಂಡಿಸಿ ರಸ್ತೆ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಂಧನ ಖಂಡಿಸಿ ರಸ್ತೆ ತಡೆ

ಬೆಳಗಾವಿ/ಬಾಗಲಕೋಟೆ: ಅಧಿವೇಶನ ಸಂದರ್ಭ ಪ್ರತಿಭಟನೆ ನಡೆಸಿದ ರೈತರ ಬಂಧನವನ್ನು ಖಂಡಿಸಿ, ಬೆಳಗಾವಿ ಮತ್ತು ಬಾಗಲಕೋಟೆಯ ಜಿಲ್ಲೆಯಲ್ಲಿ ರೈತರು ಮಂಗಳವಾರ ರಸ್ತೆ ತಡೆ ನಡೆಸಿದ್ದಾರೆ.ಬಂಧಿಸಿದ ರೈತರನ್ನು ಬಿಡುಗಡೆ ಮಾಡಬೇಕು ಎಂದು ರಾಜ್ಯ ರೈತ ಸಂಘದ ಕಾರ್ಯಕರ್ತರು ರಾಯಬಾಗದಲ್ಲಿ ರಸ್ತೆ ತಡೆ ನಡೆಸಿದರೆ, ಅಥಣಿಯಲ್ಲಿ ಎರಡು ತಾಸಿಗೂ ಹೆಚ್ಚು ಕಾಲ ರಸ್ತೆ ತಡೆ ನಡೆಯಿತು.ಬಾಕಿ ಹಣಕ್ಕಾಗಿ ಒತ್ತಾಯಿಸಿ ರಾಮದುರ್ಗದಲ್ಲಿ ಹಲವು ಗಂಟೆ ಪ್ರತಿಭಟಿಸಿದ ರೈತರು ಪಟ್ಟಣದಲ್ಲಿನ ಕಚೇರಿಗಳನ್ನು ಮುಚ್ಚಿಸಿ, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.ಬರಬೇಕಾದ ಬಾಕಿ ಹಣವನ್ನು 15 ದಿನಗಳ ಒಳಗಾಗಿ ಪಾವತಿಸಲು ಕ್ರಮ ಕೈಗೊಳ್ಳಬೇಕು; ಪಾವತಿಸದ ಸಕ್ಕರೆ ಕಾರ್ಖಾನೆಗಳ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದರು.ಗೋಕಾಕ ತಾಲ್ಲೂಕಿನ ಘಟಪ್ರಭಾದಲ್ಲಿ ಮಳೆಯನ್ನೂ ಲೆಕ್ಕಿಸದೇ ರಸ್ತೆಯಲ್ಲಿ ಕುಳಿತ ರೈತಸಮೂಹ ಸಕ್ಕರೆ ಕಾರ್ಖಾನೆಗಳ ಜೊತೆಗೆ ಸರ್ಕಾರ ಶಾಮೀಲಾಗಿದೆ ಎಂದು ಆರೋಪಿಸಿದರು. ಗೋಕಾಕ ಹೊರವಲಯದ ನಾಕಾ ನಂ. 1ರಲ್ಲಿ, ಸಂಕೇಶ್ವರ–ನರಗುಂದ ರಾಜ್ಯ ಹೆದ್ದಾರಿಯಲ್ಲಿಯೂ ಟೈರ್‌ಗೆ ಬೆಂಕಿ ಹಚ್ಚಿ,  ಸಿಟ್ಟು ಹೊರಹಾಕಿದ ರೈತರು, ಸರ್ಕಾರಕ್ಕೆ ರೈತರ ಕಣ್ಣೀರಿನ ಶಾಪ ತಟ್ಟಲಿದೆ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.