ಸೋಮವಾರ, ಏಪ್ರಿಲ್ 12, 2021
30 °C

ಬಚ್ಚ ಸಾವು, ಸಿಬಿಐ ತನಿಖೆ ನಡೆಸಿ: ಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ, (ಪಿಟಿಐ): ಜನತಾ ಪಕ್ಷದ ಅಧ್ಯಕ್ಷ ಸುಬ್ರಮಣಿಯನ್ ಸ್ವಾಮಿ ಅವರು, 2 ಜಿ ಸ್ಪೆಕ್ಟ್ರಂ ಹಗರಣದ ಪ್ರಮುಖ ಆರೋಪಿ ಕೇಂದ್ರದ ಮಾಜಿ  ಸಚಿವ ಎ.ರಾಜಾ ಅವರ ನಿಕಟವರ್ತಿ ಸಾದಿಕ್ ಬಚ್ಚ ಅವರ ಸಾವಿನ ಕುರಿತು ಸಿಬಿಐ ತನಿಖೆ ನಡೆಸಬೇಕೆಂದು ಶುಕ್ರವಾರ ಇಲ್ಲಿ ಆಗ್ರಹಿಸಿದ್ದಾರೆಬಚ್ಚ ಅವರ ಅಕಾಲಿಕ ಸಾವಿನ ಪ್ರಕರಣದ ಸಾಕ್ಷ್ಯಗಳನ್ನು ನಾಶಪಡಿಸುವ  ಸಾಧ್ಯತೆಗಳಿರುವುದರಿಂದ ಕೇಂದ್ರ ಸರ್ಕಾರ ಸಿಬಿಐ ತನಿಖೆಗೆ ಆದೇಶ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇದಲ್ಲದೇ ಸುಪ್ರೀಂ ಕೋರ್ಟ್ ಈ ಪ್ರಕರಣದ ಸಿಬಿಐ ತನಿಖೆಯ ಮೇಲುಸ್ತುವಾರಿ ವಹಿಸುವಂತೆ ಕೇಂದ್ರ ಸರ್ಕಾರ ಮನವಿಮಾಡಿಕೊಳ್ಳಬೇಕೆಂದೂ ಅವರು ಇಲ್ಲಿ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆಯಲ್ಲಿ ಕೋರಿಕೊಂಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.